ಸುಳ್ಯ: ಅಪ್ರಾಪ್ತೆ ಮೇಲೆ ಅತ್ಯಾಚಾರ
ಸುಳ್ಯ: ಉಬರಡ್ಕ ಗ್ರಾಮದ ಬೇರ್ಪಡ್ಕ ಎಂಬಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರು ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಬಾಲಕಿಯ ತಂದೆ ಬುಧವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾರ್ಚ್ 4ರಂದು 17 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅದೇ ಗ್ರಾಮದ ಸಂಜೀವ ಎಂಬವರ ಪುತ್ರ ಸುಕುಮಾರ (32) ಹಾಗೂ ಮಡಪ್ಪಾಡಿ ಗ್ರಾಮದ ಲಿಂಗಪ್ಪ ಗೌಡರ ಪುತ್ರ ರವಿಪ್ರಕಾಶ ಎಂಬವರು ಅಕ್ರಮವಾಗಿ ಮನೆಗೆ ಪ್ರವೇಶಿಸಿ ಬಾಲಕಿಯ ಕೈ ಕಟ್ಟಿ ಹಾಕಿ ಸರಣಿ ಅತ್ಯಾಚಾರ ನಡೆಸಿದ್ದಾರೆ. ಅಲ್ಲದೆ ಜಾತಿ ನಿಂದನೆ ಮಾಡಿ, ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ದಾಖಲಿಸಿದ ಪೊಲೀಸರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.