ಹೊನ್ನಾವರ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ.ಎಸ್.ಡಿ. ಶೆಟ್ಟಿ
ಧರ್ಮಸ್ಥಳ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕವಲಕ್ಕಿಯಲ್ಲಿ ಮಾ.8ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಉಜಿರೆಯ ಎಸ್.ಡಿ. ಎಮ್. ಕಾಲೇಜಿನಲ್ಲಿರುವ ಡಾ. ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎಸ್.ಡಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 30 ವರ್ಷ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಬಳಿಕ ಧರ್ಮಸ್ಥಳ ಮಂಜೂಷಾ ವಸ್ತು ಸಂಗ್ರಹಾಲಯದ ಕ್ಯುರೇಟರ್ ಆಗಿ ಹಾಗೂ ಡಾ.ಹಾ.ಮಾ.ನಾ. ಸಂಶೋಧನಾ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೂಲತಃ ಹೊನ್ನಾವರದ ಹಳದೀಪುರದವರಾದ ಡಾ. ಎಸ್.ಡಿ. ಶೆಟ್ಟಿ 35 ಸಾಹಿತ್ಯ ಕೃತಿಗಳನ್ನೂ 50 ಸಂಶೋಧನಾ ಲೇಖನಗಳನ್ನೂ ಬರೆದಿದ್ದು, ತುಳುನಾಡಿನ ಜೈನ ಧರ್ಮ ಒಂದು ಸಾಂಸ್ಕೃತಿಕ ಅಧ್ಯಯನ ಎಂಬ ಪ್ರೌಢ ಪ್ರಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾಲಯ ಪಿ.ಎಚ್.ಡಿ. ನೀಡಿ ಗೌರವಿಸಿದೆ.