ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಕಾರ್ಕಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಎರ್ಲಪಾಡಿ ಗ್ರಾಮದ ಪಾದೆಮನೆ ಎಂಬಲ್ಲಿ ಶನಿವಾರ ನಡೆದಿದೆ. ಮೃತರು ರಾಜೇಶ ಶೆಟ್ಟಿ (34). ಅವರು ಕಳೆದ 3-4 ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದೇ ಕಾರಣಕ್ಕಾಗಿ ಮನನೊಂದು ಮನೆಯ ಚಾವಡಿಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.