ಪಾಲಿಕೆ ಮಾಜಿ ಸದಸ್ಯ ಗಣೇಶ್ ರಾವ್ ನಿಧನ
ಮಂಗಳೂರು: ಮಹಾನಗರ ಪಾಲಿಕೆ ಮಾಜಿ ಸದಸ್ಯ ಗಣೇಶ್ ರಾವ್(50)ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ. ಆರ್‌ಎಸ್‌ಎಸ್ ಕಾರ್ಯಕರ್ತರಾದ ಇವರು 2004-09ರ ಅವಧಿಯಲ್ಲಿ ಕದ್ರಿ ದಕ್ಷಿಣ ವಾರ್ಡ್‌ನಿಂದ ಪಾಲಿಕೆ ಸದಸ್ಯರಾಗಿದ್ದರು. ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ರಾಜಕೀಯವಲ್ಲದೆ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಪರಿಚಿತರಾಗಿದ್ದರು. ಬಂದರು ಪ್ರದೇಶದಲ್ಲಿ ಮೆಟಲ್ ಹೌಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಇವರ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರತಾಪ್‌ಸಿಂಹ ನಾಯಕ್, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
--