ವೀರೇಶಾನಂದ ಸ್ವಾಮೀಜಿಗೆ ಏರ್ಯ ಪ್ರಶಸ್ತಿ
ಮಂಗಳೂರು: ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು 'ಏರ್ಯ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಕೆನರಾ ಪ್ರಥಮ ದರ್ಜೆ ಕಾಲೇಜು ವತಿಯಿಂದ ಮಾ. 14 ರಂದು ಸಂಜೆ 3 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಸಂದರ್ಭ ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ. ರಾಮಚಂದ್ರ, ಕೆನರಾ ಪ್ರೌಢಶಾಲೆ ಸಂಘ ಅಧ್ಯಕ್ಷ ಎಸ್.ಎಸ್. ಕಾಮತ್, ಪ್ರಶಸ್ತಿ ದತ್ತಿನಿಧಿ ಸ್ಥಾಪಕ ಏರ್ಯ ಲಕ್ಷ್ಮಿನಾರಾಯಣ ಆಳ್ವರು ಪಾಲ್ಗೊಳ್ಳುವರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ಸತೀಶ್ ಭಟ್ ತಿಳಿಸಿದ್ದಾರೆ.
ಪಿಯು ಪರೀಕ್ಷೆ ಆರಂಭ
ಮಂಗಳೂರು: ಮಂಗಳೂರಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದರು. ಪ್ರಥಮ ದಿನ ರಾಜಕೀಯ ಶಾಸ್ತ್ರ ಪರೀಕ್ಷೆಗೆ ಒಟ್ಟು 6829 ಮಂದಿಯಲ್ಲಿ 6662 ವಿದ್ಯಾರ್ಥಿಗಳು ಹಾಜರಾಗಿದ್ದು, 167 ವಿದ್ಯಾರ್ಥಿಗಳು ಗೈರಾಗಿದ್ದರು. ಸಂಖ್ಯಾಶಾಸ್ತ್ರ ಪರೀಕ್ಷೆಗೆ ಒಟ್ಟು 5265 ಮಂದಿಯಲ್ಲಿ 5237 ವಿದ್ಯಾರ್ಥಿಗಳು ಹಾಜರಾಗಿದ್ದು, 78 ಮಂದಿ ಗೈರಾಗಿದ್ದರು.
ಉಡುಪಿಯಲ್ಲಿ 83 ಮಂದಿ ಗೈರು
ಉಡುಪಿ: ರಾಜ್ಯಾದ್ಯಂತ ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮೊದಲ ದಿನ ರಾಜ್ಯಶಾಸ್ತ್ರ ಪರೀಕ್ಷೆಯಲ್ಲಿ 2,688 ವಿದ್ಯಾರ್ಥಿಗಳು ಹಾಜರಾಗಿದ್ದು, 70 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಸಂಖ್ಯಾಶಾಸ್ತ್ರ ಪರೀಕ್ಷೆಯಲ್ಲಿ 2,145 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 13 ವಿದ್ಯಾರ್ಥಿಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಶಿಂಧಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.