ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಎಂಡೋ ಮಾಸಾಶನ ಇನ್ನೂ ಬ್ಯಾಂಕ್ ಖಾತೆಗೆ ಪಾವತಿಯಾಗಿಲ್ಲ

Srinivasa Murthy VN
Updated On : 15 Mar 2014, 12:37 pm

ಮಂಗಳೂರು: ಎಂಡೋ ಸಂತ್ರಸ್ತರಿಗೆ ಮಾಸಾಶನ ವಿತರಿಸುವ ಪ್ರದರ್ಶನ ನಡೆಯುತ್ತಿದೆಯೇ ಹೊರತು, ಸಂತ್ರಸ್ತರ ಬ್ಯಾಂಕ್ ಖಾತೆಗೆ ಪಾವತಿಯಾಗಿಲ್ಲ ಎಂದು ಬೆಳ್ತಂಗಡಿ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಆರೋಪಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮಾ.1ರೊಳಗೆ ರಾಜ್ಯದ ಎಲ್ಲ ಸಂತ್ರಸ್ತರಿಗೆ ಜನವರಿಯಿಂದ ಆರಂಭವಾಗುವಂತೆ 3000 ಮತ್ತು 1500 ಮಾಸಾಶನ ವಿತರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿತ್ತು. ಇದರಂತೆ 100 ಮಂದಿಗೆ ಮಾತ್ರ ಮಾಸಾಶನ ವಿತರಿಸಲಾಗಿದೆ. ಅಲ್ಲದೆ ಕೊಕ್ಕಡ ಗ್ರಾಪಂ ವ್ಯಾಪ್ತಿಯಲ್ಲಿ ಆರೋಗ್ಯ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಎಂಡೋ ಸಂತ್ರಸ್ತರ ಬಹುಪಯೋಗಿ ಗುರುತಿನ ಕಾರ್ಡ್ ವಿತರಿಸುವ ಕಾರ್ಯಕ್ರಮ ನಡೆಸಿದ್ದರು. ಈ ಸಂದರ್ಭದಲ್ಲಿ ಸಾಂಕೇತಿಕವಾಗಿ 8 ಮಂದಿಗೆ ಗುರುತಿನ ಕಾರ್ಡ್ ವಿತರಿಸಲಾಗಿದೆ. ಕೇವಲ ಪ್ರಚಾರಕ್ಕಾಗಿ ಮಾತ್ರ ಕಾರ್ಯಕ್ರಮ ನಡೆಯುತ್ತಿದೆ' ಎಂದು ಅವರು ಆರೋಪಿಸಿದರು.

ಪರೀಕ್ಷೆಯಲ್ಲಿ ನಕಲು:  ಪಿಯು ವಿದ್ಯಾರ್ಥಿ ಡಿಬಾರ್
ಮಂಗಳೂರು:
ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಿದ ಘಟನೆ ಶುಕ್ರವಾರ ದೇರಳಕಟ್ಟೆಯಲ್ಲಿ ನಡೆದಿದೆ.  ಕಣಚೂರು ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಮಾಜಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಯೊಬ್ಬ ನಕಲು ಮಾಡುತ್ತಿದ್ದ. ವಿಶೇಷ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿದ ವೇಳೆ ಈತ ಸಿಕ್ಕಿಬಿದ್ದಿದ್ದಾನೆ. ಬಳಿಕ ಈತನ್ನು ಪರೀಕ್ಷೆಯಿಂದ ಡಿಬಾರ್ ಮಾಡಲಾಗಿದೆ. ಜಿಲ್ಲೆಯ 49 ಪಿಯು ಪರೀಕ್ಷಾ ಕೇಂದ್ರಗಳಲ್ಲಿ ಸಮಾಜಶಾಸ್ತ್ರ ಪರೀಕ್ಷೆಗೆ 6222 ವಿದ್ಯಾರ್ಥಿಗಳಲ್ಲಿ 6076 ಮಂದಿ ಹಾಜರಾಗಿದ್ದರು. 146 ವಿದ್ಯಾರ್ಥಿಗಳು ಗೈರಾಗಿದ್ದರು. ಲೆಕ್ಕಶಾಸ್ತ್ರ ವಿಭಾಗದಲ್ಲಿ 15175 ವಿದ್ಯಾರ್ಥಿಗಳಲ್ಲಿ 14930 ವಿದ್ಯಾರ್ಥಿಗಳು ಹಾಜರಾಗಿದ್ದು, 245 ಮಂದಿ ಗೈರಾಗಿದ್ದರು. ಶನಿವಾರ ಭೌತಶಾಸ್ತ್ರ ಮತ್ತು ಮನಃಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement