ಮಂಗಳೂರು: ಇಂದು 'ಕಯ್ಯಾರ 99' ಮೆಲುಕು
ಮಂಗಳೂರು: ಬಂಟ್ಸ್ ಹಾಸ್ಟೆಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಮಾ. 15 ರಂದು ಸಂಜೆ 5 ಗಂಟೆಗೆ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ 'ಕಯ್ಯಾರ 99' ವೀಡಿಯೋ ವೀಕ್ಷಣೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಕೋಡಿಪ್ರಸಾದ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದಿನಿಂದ ಎಂಡೋ ಸಂತ್ರಸ್ತರ ತಪಾಸಣೆ ಶಿಬಿರ
ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಗೆ ಸೇರ್ಪಡೆಗೊಂಡ ಸಂತ್ರಸ್ತರ ಮರು ತಪಾಸಣೆ ಶಿಬಿರ ದ.ಕ. ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ.
ಮಾ. 15 ರಂದು ಪಡಂಗಡಿ ಆರೋಗ್ಯ ಕೇಂದ್ರ, ಮಾ. 18 ರಂದು ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಮಾ. 19 ರಂದು ಸುಳ್ಯ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮಾ. 21 ರಂದು ಪುತ್ತೂರು ಸಾರ್ವಜನಿಕ ಆರೋಗ್ಯ ಕೇಂದ್ರ, ಮಾ. 26 ರಂದು ಕೈಲ ಪ್ರಾಥಮಿಕ ಆರೋಗ್ಯ ಕೇಂದ್ರ, ಮಾ. 27 ರಂದು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.