ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ: ನಳಿನ್ ಕುಮಾರ್
ಮಂಗಳೂರು: ಈಗಾಗಲೇ 2 ಸುತ್ತಿನ ಪ್ರವಾಸ ಮುಗಿಸಿದ್ದು, ಜಿಲ್ಲೆಯ ಎಲ್ಲೆಡೆ ಬಿಜೆಪಿ ಪರ ಅಲೆ ಇದೆ ಎಂದು ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಈ ಬಾರಿ 40 ಸಾವಿರಕ್ಕೂ ಅಧಿಕ ಮತ ಅಂತರದಿಂದ ಗೆಲವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನರೇಂದ್ರ ಮೋದಿ ಹವಾ ಇದ್ದು, ಎನ್ಡಿಎ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆ, ತಾನು 5 ವರ್ಷದಲ್ಲಿ ಕೈಗೊಂಡ ಅಭಿವೃದ್ಧಿಯನ್ನು ಜನರಿಗೆ ತಲಪಿಸಲಾಗುವುದು. ಮನೆ ಮನೆಗೆ ಭೇಟಿ ಮಾಡಿ ಮತಯಾಚನೆ ನಡೆಸಲಾಗುವುದು ಎಂದರು.