ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಕ್ಷಿಣ ಕನ್ನಡ

ಬಸ್ ನಿಲ್ಲಿಸಿ ನಿರ್ವಾಹಕಗೆ ಹಲ್ಲೆ

Lingaraj Badiger
Updated On : 14 May 2014, 11:56 am

ಮೂಲ್ಕಿ: ಮೂಲ್ಕಿಯ ಕೊಕ್ಕರ್‌ಕಲ್ ಬಳಿಯ ಪೆಟ್ರೋಲ್ ಪಂಪ್ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಣಿಪಾಲದಿಂದ ಮಂಗಳೂರಿಗೆ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್ ನಿಲ್ಲಿಸಿ ಬಸ್‌ಗೆ ಹತ್ತಿದ ಸುಮಾರು ನಾಲ್ಕು ಮಂದಿ ಹಿಂದೆ ಕುಳಿತಿದ್ದ ನಿರ್ವಾಹಕನಿಗೆ ಹಲ್ಲೆ ನಡೆಸಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮುಸ್ತಾಫ್ ಕೆಮಾಲ್ ಹಲ್ಲೆಗೊಳಗಾದ ನಿರ್ವಾಹಕ. ನಿರ್ವಾಹಕನ ಬಳಿ ಬಂದ ನಾಲ್ವರು ದುಷ್ಕರ್ಮಿಗಳು ಫಾರೂಕ್ ಯಾರೆಂದು ಕೇಳಿದ್ದಾರೆ. ಆತ ತಾನು ಫಾರೂಕ್ ಅಲ್ಲವೆಂದು ಹೇಳಿದರೂ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಬಸ್ ಚಾಲಕ ಮೂಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಯಕ್ಷಗಾನ ಪ್ರದರ್ಶನ ನಾಳೆ
ಉಡುಪಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ಉಡುಪಿ ಜಿಲ್ಲಾ ಘಟಕದ ವತಿಯಿಂದ 15ರಂದು ಸಂಜೆ 6.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ 'ಜಗಜ್ಯೋತಿ ಬಸವೇಶ್ವರ ಚಿರಿತ್ರೆ' ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ನಾಟ್ಯಶ್ರೀ ಕಲಾ ತಂಡದ ಕಲಾವಿದರು ಈ ವಿಶಿಷ್ಟ ಯಕ್ಷಗಾನವನ್ನು ಪ್ರದರ್ಶಿಸಲಿದ್ದಾರೆ ಎಂದು ಪರಿಷತ್‌ನ ಪ್ರಕಟಣೆ ತಿಳಿಸಿದೆ.


ಬಿಜೆಪಿಯಿಂದ ಇಬ್ಬರ ಉಚ್ಚಾಟನೆ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲಂಕಾರಿನ ಇಬ್ಬರು ಸ್ಥಳೀಯ ನಾಯಕರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದೆ. ಆಲಂಕಾರು ಸಿಎ ಬ್ಯಾಂಕ್ ನಿರ್ದೇಶಕ ದಯಾನಂದ ಕರ್ಕೇರಾ ಹಾಗೂ ಗ್ರಾಮ ಸಮಿತಿ ಕಾರ್ಯದರ್ಶಿ ಸದಾನಂದ ಪೂಜಾರಿ ಉಚ್ಚಾಟಿತರು. ಅವರು ಈ ಬಾರಿಯ ಲೋಕಸಭೆ ಚುನಾವಣೆ ಸಂದರ್ಭ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಪ್ರಚಾರ ಮಾಡಿರುವುದರ ಬಗ್ಗೆ ಸುಳ್ಯ ಮಂಡಲ ಸಮಿತಿಯು ಜಿಲ್ಲಾ ಸಮಿತಿಗೆ ವರದಿ ಸಲ್ಲಿಸಿ, ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶಿಫಾರಸು ಮಾಡಿತ್ತು. ಈ ಶಿಫಾರಸಿನ ಮೇರೆಗೆ ಜಿಲ್ಲಾ ಸಮಿತಿಯು ವರದಿಯನ್ನು ಪರಿಶೀಲಿಸಿ ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಸ್ಪಷ್ಟವಾದ ಕಾರಣ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.


ಕರಾಯ: ಯುವಕನ ಮೃತದೇಹ ಪತ್ತೆ
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕರಾಯ ಗ್ರಾಮದ ಪಿಲಿಗೂಡು ಕಲಾಪು ತೋಟದ ಮನೆ ನಿವಾಸಿ ವಿಶ್ವನಾಥ ಪೂಜಾರಿ (26) ಎಂಬವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಮುಡಿಪು ಎಂಬಲ್ಲಿ ಬಾರ್‌ವೊಂದರ ನಿರ್ವಾಹಕನಾಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಸೋಮವಾರ ಕರ್ತವ್ಯಕ್ಕೆಂದು ಹೋದವರು ಮನೆಗೆ ಹಿಂತಿರುಗಿರಲಿಲ್ಲ. ಮಂಗಳವಾರ ಮನೆ ಸಮೀಪ ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮರಣಪತ್ರ ಪತ್ತೆಯಾಗಿದ್ದು, ಇದರಲ್ಲಿ ತನ್ನ ಸಾವಿಗೆ ತಾನೇ ಕಾರಣ ಎಂದು ಉಲ್ಲೇಖಿಸಿ, ದಿನಾಂಕವನ್ನು 21.4.14 ಎಂದು ಬರೆಯಲಾಗಿತ್ತು. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement