ಅಪಪ್ರಚಾರಕ್ಕೆ ತಡೆಯಾಜ್ಞೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದ, ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ವಿರುದ್ಧ ಅಪಪ್ರಚಾರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುದ್ದಿಮಾಧ್ಯಮಗಳಲ್ಲಿ ಅಪಪ್ರಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ರಜಾ ಕಾಲದ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಸತೀಶ್ ಶೆಟ್ಟಿ ಎಂಬವರು ನೀಡಿರುವ ದೂರಿನ ಕುರಿತು ಅಥವಾ ಇದಕ್ಕೆ ಸಂಬಂಧ ಪಟ್ಟ ಯಾವುದೇ ವಿಷಯವನ್ನು ದೃಶ್ಯ ಮಾಧ್ಯಮದಲ್ಲಿ ಪ್ರಕಟಿಸುವುದಕ್ಕೆ ಹಾಗೂ ಬಿತ್ತರಿಸುವುದಕ್ಕೆ ನ್ಯಾಯಾಲಯ ಬುಧವಾರ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ ಎಂದು ನ್ಯಾಯವಾದಿ ಶಂಭುಶರ್ಮ ತಿಳಿಸಿದ್ದಾರೆ.