ತನಿಖೆ ವಿವರಕ್ಕೆ ಆಗ್ರಹ
ಮಂಗಳೂರು: ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಸಾವಿನ ಸಿಬಿಐ ತನಿಖೆ ಹಾಗೂ ಸುಬ್ರಹ್ಮಣ್ಯ ಬಳಿ ಶಾರಿಕಾ ಸಾವಿನ ತನಿಖೆ ಬಗ್ಗೆ ವಿವರ ನೀಡುವಂತೆ ಬುಧವಾರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಸೌಜನ್ಯಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ. ತನಿಖೆಯ ಪ್ರಗತಿ ಯಾವ ಹಂತದಲ್ಲಿದೆ ಎಂಬುದು ಗೊತ್ತಾಗಿಲ್ಲ. ಆದಷ್ಟು ಬೇಗ ತನಿಖೆ ಮುಕ್ತಾಯಗೊಳಿಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಅಲ್ಲದೆ ಆ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.