ವಿಮಾನ ಅಪಘಾತ ಸ್ಮಾರಕ ನಿರ್ಮಾಣ: ಸಚಿವ ರೈ
ಮಂಗಳೂರು: ನಾಲ್ಕು ವರ್ಷದ ಹಿಂದೆ ಮಂಗಳೂರು ವಿಮಾನ ಅಪಘಾತದಲ್ಲಿ ಮಡಿದವರ ಸ್ಮರಣಾರ್ಥ ವಿಮಾನ ನಿಲ್ದಾಣ ಬಳಿ ಸ್ಮಾರಕ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಭರವಸೆ ನೀಡಿದ್ದಾರೆ. ಗುರುವಾರ ಬಜ್ಪೆ ವಿಮಾನ ನಿಲ್ದಾಣದಲ್ಲಿ 2010ರ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಗೌರವಾರ್ಪಣೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಶೀಘ್ರವೇ ಈ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.