ವೈದ್ಯಕೀಯ ತಪಾಸಣೆ ಶಿಬಿರ ನಾಳೆ
ಬಂಟ್ವಾಳ: ಮಂಗಳೂರು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್, ನಂದಾವರ ಎಸ್.ಕೆ.ಎಸ್.ಎಸ್.ಎಫ್., ಮಂಗಳೂರು ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಆ್ಯಂಡ್ ಡೆಂಟಲ್ ಸಾಯನ್ಸ್ ವತಿಯಿಂದ ವೈದ್ಯಕೀಯ ಉಚಿತ ತಪಾಸಣಾ ಶಿಬಿರವು 1 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12.30 ರವರೆಗೆ ನಂದಾವರ ಎಸ್ಕೆಎಸ್ಎಸ್ಎಫ್ ಕಚೇರಿಯಲ್ಲಿ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಲಿದ್ದು, ಕಣ್ಣಿನ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ, ಮಕ್ಕಳ ತಪಾಸಣೆ, ಚರ್ಮ ರೋಗ ತಪಾಸಣೆ, ಸಾಮಾನ್ಯ ವೈದ್ಯಕೀಯ ತಪಾಸಣೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.