ದಾವಣಗೆರೆ: ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಸ್ಥಿರ ಪೀಠಾಧಿಪತಿ ಡಾ. ಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಫೆ.5ರಂದು ಹರಿಹರ ತಾ. ಹನಗವಾಡಿ ಸಮೀಪದ ಪಂಚಮಸಾಲಿ ಪೀಠದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಲಿಂಗೈಕ್ಯ ಗುರುಗಳ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಸುಭಾಷ್ ಶಿವಪ್ಪ ಪಟ್ಟಣಶೆಟ್ಟಿ ತಿಳಿಸಿದ್ದಾರೆ.
ಲಿಂಗೈಕ್ಯ ಗುರುಗಳ ಅಂತ್ಯಕ್ರಿಯೆ ಅಂದು ಮಧ್ಯಾಹ್ನ 1 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಲಿಂಗೈಕ್ಯ ಗುರುಗಳ ಗೌರವಾರ್ಥ ಮಂಗಳವಾರ ಜಿಲ್ಲಾದ್ಯಂತ ಶಾಲಾ- ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ನೀಡುವ ರಜೆಯನ್ನು ಫೆ.9ರಂದು ಪೂರ್ಣದಿನ ಶಾಲಾ- ಕಾಲೇಜು ತರಗತಿ ನಡೆಸುವಂತೆ ಎಲ್ಲಾ ಶಾಲಾ- ಕಾಲೇಜು ಮುಖ್ಯಸ್ಥರು, ಆಡಳಿತ ಮಂಡಳಿಗೆ ಜಿಲ್ಲಾಧಿಕಾರಿ ಸುಭಾಷ್ ಶಿವಪ್ಪ ಪಟ್ಟಣಶೆಟ್ಟಿ ಆದೇಶ ಹೊರಡಿಸಿದ್ದಾರೆ.