ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ಆಧಾರ್ ಕೇಂದ್ರಕ್ಕೆ ಬೀಗ ಜಡಿದು ಪ್ರತಿಭಟನೆ

Parashurama
Updated On : 10 Feb 2013, 10:31 am

ದಾವಣಗೆರೆ: ಆಧಾರ ಕೇಂದ್ರದಲ್ಲಿ ಆಗುತ್ತಿರುವ ವಿಳಂಬ ನೀತಿ ಖಂಡಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಗರದ ವಿವಿಧೆಡೆ ಆಧಾರ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಗರದ ಆದಾರ ಕೇಂದ್ರಕ್ಕೆ ಗುರುವಾರ ಬೀಗ ಜಡಿದು ಪ್ರತಿಭಟನೆ ನಡೆಸಿತು.
ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆ ಸಮೀಪದ ಆದಾರ ಕೇಂದ್ರಕ್ಕೆ ಸಂಘಟನೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ ಇತರರ ನೇತೃತ್ವದಲ್ಲಿ ಬೀಗ ಜಡಿದ ಪ್ರತಿಭಟನಾಕಾರರು, ರಸ್ತೆ ತಡೆ ನಡೆಸಿ, ಆಧಾರ್ ಕೇಂದ್ರದ ಅವ್ಯವಸ್ಥೆಯನ್ನು ಸರಿಪಡಿಸಿ, ಜಿಲ್ಲಾ ಕೇಂದ್ರದ ವಿವಿಧೆಡೆ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.
ಇದೇ ವೇಳೆ ಮಾತನಾಡಿದ ಎಂ.ಎಸ್. ರಾಮೇಗೌಡ, ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ, ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು 7 ಲಕ್ಷಕ್ಕೂ ಅಧಿಕ ಜನರಿಗೆ ಕೇವಲ 2 ಆಧಾರ್ ಕೇಂದ್ರದಿಂದ ಜನರಿಗೆ ಕೇಂದ್ರದಿಂದ ಸದುಪಯೋಗ ವಾಗುತ್ತಿಲ್ಲ. ಒಂದು ಕೇಂದ್ರ ನಿಲ್ಲಿಸಲಾಗಿದ್ದು, ಉಳಿದ ಒಂದೇ ಕೇಂದ್ರದಿಂದ ಜನರಿಗೆ ಸೇವೆ ಒದಗಿಸಲಾಗುತ್ತಿದೆ. ಇದರಿಂದ ತೀವ್ರ ಸಮಸ್ಯೆಯಾಗುತ್ತಿದೆ ಎಂದರು.
ಡಿಸಿ ಕಚೇರಿಗೆ ಮುತ್ತಿಗೆ; ಎಚ್ಚರಿಕೆ: ಆಗುತ್ತಿರುವ ಗೊಂದಲ, ಸಮಸ್ಯೆಗೆ ಪರಿಹಾರವನ್ನು ಜಿಲ್ಲಾಡಳಿತ ಕಲ್ಪಿಸಬೇಕು. ಸಾರ್ವಜನಿಕರಿಗೆ ಸುಗಮವಾಗಿ ಆದಾರ ಕೇಂದ್ರದ ಸೇವೆ ಸಿಗುವಂತೆ ವ್ಯವಸ್ಥೆ ಮಾಡಬೇಕು. ಉದಾಸೀನ ಮಾಡಿದರೆ, ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದರು.
ವಿಜಯೇಂದ್ರ, ಧೀರೇಂದ್ರ, ಸಾವಿತ್ರಮ್ಮ, ಲಕ್ಷ್ಮಿಬಾಯಿ, ಗುರುಮೂರ್ತಿ, ನಾಗರಾಜ, ಮೀನಾಬಾಯಿ, ಹನುಮಂತಪ್ಪ, ಕೊಟ್ರಮ್ಮ, ನಿರ್ಮಲ, ಅನ್ನಪೂರ್ಣಮ್ಮ, ವಿಜಯಮ್ಮ, ಕಮಲಮ್ಮ, ಸುರೇಶ, ಷಪೀ ಅಹಮದ್, ಇಮ್ರಾನ್, ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments