ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ನಾಳೆ ರೈತರ ಪ್ರತಿಭಟನೆ

Parashurama
Updated On : 10 Feb 2013, 10:31 am

ದಾವಣಗೆರೆ: ದಾವಣಗೆರೆ ಉಪ ನೋಂದಣಾಧಿಕಾರಿ ಕಚೇರಿಯನ್ನು ಏಕಾಏಕಿ ಹಳೆ ಕಚೇರಿಯಿಂದ ಐದಾರು ಕಿ.ಮೀ. ದೂರದ ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಿದ್ದು, ಇದರಿಂದ ಸಾರ್ವಜನಿಕರು, ಗ್ರಾಮೀಣರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ಫೆ.11ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ರೈತ ಹಾಲುವರ್ತಿ ದೇವೇಂದ್ರಪ್ಪ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಪೂರ್ವ ಮಾಹಿತಿ ನೀಡದೆ ಏಕಾಏಕಿ ಸ್ಥಳಾಂತರಿಸಿರುವುದನ್ನು ಖಂಡಿಸಿ ಅಂದು ಮಧ್ಯಾಹ್ನ 12ಕ್ಕೆ ದಾವಣಗೆರೆ ನಗರ, ಗ್ರಾಮೀಣ ಜನತೆ, ರೈತರು ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆ ಎಂದರು. ಕುಂದುವಾಡ ಎಚ್.ಜಿ. ಹನುಮಂತಪ್ಪ, ಕುಂದುವಾಡ ಕೆ.ಜೆ. ರುದ್ರಪ್ಪ, ಎಚ್. ಹುಸೇನ್‌ಸಾಬ್, ರಾಜಣ್ಣ, ಚಂದ್ರಪ್ಪ, ಜಮೀರ್ ಅಹಮ್ಮದ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments