ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ

Parashurama
Updated On : 10 Feb 2013, 10:23 am

ಹರಪನಹಳ್ಳಿ: ಒಂದು ಜನಾಂಗದಲ್ಲಿ ಹೆಚ್ಚಿನ ಶಿಕ್ಷಣವಂತರಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಇಲ್ಲಿನ 8ನೇ ವಾರ್ಡ್‌ನ ವಾಲ್ಮೀಕಿ ಸಮುದಾಯ ಭವನದಲ್ಲಿ ಬೋವಿ ಸಮಾಜ ಮತ್ತು ವಾಲ್ಮೀಕಿ ಸಮಾಜದ  ವತಿಯಿಂದ ಶುಕ್ರವಾರ ರಾತ್ರಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಮೇಲ್ವರ್ಗದ ಸಮುದಾಯಗಳಂತೆ ಎಲ್ಲ ಶೋಷಿತ ಸಮುದಾಯಗಳು ಅಭಿವೃದ್ಧಿಯಾಗಬೇಕು. ಬಹಳ ವರ್ಷಗಳಿಂದ ಸರ್ಕಾರದಿಂದ ಅನೇಕ ಸೌಲಭ್ಯಗಳು ಶೋಷಿತ ಜನಾಂಗಕ್ಕೆ ಸಿಗುತ್ತಿವೆ. ಹಾಗಾಗಿ ಶೋಷಿತ ಸಮುದಾಯದ ಪರ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಮುಂಬರುವ ಚುನಾವಣೆಯಲ್ಲಿ ಬೆಂಬಲಿಸಿ  ಅಧಿಕಾರಕ್ಕೆ ತನ್ನಿ ಎಂದು ಅವರು ಸಲಹೆ ನೀಡಿದರು.  
ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ , ಕೆಪಿಸಿಸಿ ಪರಿಶಿಷ್ಟ ಪಂಗಡ ಘಟಕದ  ರಾಜ್ಯಾಧ್ಯಕ್ಷ ಟಿ. ಈಶ್ವರ, ಜಿಪಂ ಸದಸ್ಯ ಕೆ.ಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ. ಹಾಲೇಶ, ಬೋವಿ ಸಮಾಜದ ಮುಖಂಡ ಎಂ.ವಿ. ಅಂಜಿನಪ್ಪ, ಟಿಎಚ್‌ಎಂ ವಿರೂಪಾಕ್ಷಯ್ಯ, ಹಲಗೇರಿ ಮಂಜಪ್ಪ, ಅಂಜುಮನ್ ಕಮಿಟಿ ಅಧ್ಯಕ್ಷ ಜಾವೇದ್, ನಿಚ್ಚವ್ವನಹಳ್ಳಿ ಪರಶುರಾಮಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments