ಪುರಂದರ ದಾಸರ ಆರಾಧನೆ 22ರಂದು
ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಎಸ್ಬಿಸಿ ಪ್ರಥಮ ದರ್ಜೆ ಮಹಿಳಾಕಾಲೇಜಿನಿಂದ ಪುರಂದರದಾಸರ ಆರಾಧನೆ ಹಾಗೂ ಸಾಂಸ್ಕೃತಿಕ ಸೌರಭದಡಿ ಸಂಗೀತ ಮತ್ತು ರಸಗ್ರಹಣ ಕಾರ್ಯಕ್ರಮ ಫೆ.11ರಂದು ನಗರದ ಅಥಣಿ ಎಸ್ಬಿಸಿ ಮಹಿಳಾ ಪದವಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಸುಭಾಷ್ ಶಿವಪ್ಪ ಪಟ್ಟಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕಾಲೇಜು ಅಧ್ಯಕ್ಷ ಡಾ. ಕೆ. ಷಣ್ಮುಖ ಅಧ್ಯಕ್ಷತೆ ವಹಿಸಲಿದ್ದಾರೆ. ನಾಟ್ಯಭಾರತಿ ಶಾಸ್ತ್ರೀಯ ನೃತ್ಯ ಹಾಗೂ ಸಂಗೀತ ಕಲಾ ಕೇಂದ್ರದ ಗೌರವಾಧ್ಯಕ್ಷ ಮಂಜುನಾಥ, ಸ್ಪೂರ್ತಿ ಸೇವಾ ಸಂಘದ ಅಧ್ಯಕ್ಷ ರಾಜು, ಸಪ್ರದ ಕಾಲೇಜು ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ. ಎಂ. ಮಂಜಣ್ಣ ಪುರಂದರ ಕೀರ್ತನೆಗಳಲ್ಲಿ ಸಮಾಜ ವಿಷಯ ವಿಷಯವಾಗಿ ಉಪನ್ಯಾಸ ನೀಡುವರು. ಡಾ. ಕೆ. ನಾರಾಯಣಸ್ವಾಮಿ ಕನ್ನಡ ಭಾಷೆಯ ಆಯಾಮಗಳು ವಿಷಯವಾಗಿ ಮಾತನಾಡುವರು. ವಾಮದೇವ, ಆನಂದಗೌಡ ಆರ್. ಪಾಟೀಲ್ ಮತ್ತು ತಂಡವು ಪುರಂದರ ದಾಸರ ಕೀರ್ತನೆಗಳನ್ನು ನಡೆಸಿಕೊಡಲಿದೆ. ಕದಳಿ ವೇದಿಕೆಯಿಂದ ವಚನ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.