ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ವಡೇರ ಹತ್ತೂರಿನಲ್ಲಿ ಬ್ಯಾಂಕಿಂಗ್ ಬಗ್ಗೆ ಅರಿವು

Parashurama
Updated On : 11 Feb 2013, 11:24 am

ದಾವಣಗೆರೆ: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿಯಂತೆ ಹೊನ್ನಾಳಿ ತಾ. ವಡೇರ ಹತ್ತೂರು ಗ್ರಾಮದಲ್ಲಿ ದಾವಣಗೆರೆ ಅಮೂಲ್ಯ ಆರ್ಥಿಕ ಸಾಕ್ಷರತೆ ಕೇಂದ್ರದ ಸಮಾಲೋಚಕ ರಘುನಾಥ ರಾವ್ ತಾಪ್ಸೆ ನೇತೃತ್ವದಲ್ಲಿ ಮನೆ ಮನೆಗೆ ತೆರಳಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಾದ ಬದಲಾವಣೆ ಕುರಿತು ಅರಿವು ಮೂಡಿಸಲಾಯಿತು.
ವಡೇರಿ ಹತ್ತೂರು ಗ್ರಾಮಸ್ಥರು, ರೈತರು, ಕೃಷಿ ಕೂಲಿ ಕಾರ್ಮಿಕರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರನ್ನು ಭೇಟಿ ಮಾಡಿ, ಬ್ಯಾಂಕಿಂಗ್ ಕ್ಷೇತ್ರದ ಬೆಳವಣಿಗೆ, ಆಧಾರ್ ಕಾರ್ಡ್ ಮಹತ್ವ, ಪ್ಯಾನ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ರಾಷ್ಟ್ರೀಯ ಪಿಂಚಣಿ ಯೋಜನೆ, ಸ್ವಾವಲಂಬನೆ, ಆರೋಗ್ಯ ವಿಮೆ, ಗ್ರಾಮೀಣ ಸ್ವಉದ್ಯೋಗ ತರಬೇತಿಯ ಕುರಿತಂತೆ ಮಾಹಿತಿ, ಜನಾರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಯಿತು.
ಬ್ಯಾಂಕ್ ಖಾತೆ ಅಗತ್ಯ: ಬ್ಯಾಂಕ್‌ನಲ್ಲಿ ಖಾತೆ ತೆರೆಯುವುದು ಇಂದು ತೀರಾ ಅತ್ಯವಶ್ಯಕವಾಗುತ್ತಿದೆ. ಸರ್ಕಾರದ ವಿವಿಧ ಯೋಜನೆಯಡಿ ಸಹಾಯಧನ, ಸಾಮಾಜಿಕ ಭದ್ರತೆಯಡಿ ಅರ್ಹ ಫಲಾನುಭವಿಗೆ ನೀಡುವ ನಿವೃತ್ತಿ ವೇತನ, ಅಂಗವಿಕಲರ ಮಾಸಾಶನ, ವಿಧವಾ ವೇತನ, ಶಾಲಾ ಮಕ್ಕಳ ವಿದ್ಯಾರ್ಥಿ ವೇತನ, ಸಂಧ್ಯಾ ಸುರಕ್ಷಾ ವೇತನೆ, ಅಡುಗೆ ಅನಿಲಕ್ಕೆ ನೀಡುವ ಸಬ್ಸಿಡಿ ಪಡೆಯಲು ಬ್ಯಾಂಕ್‌ಗಳಲ್ಲಿ ಖಾತೆ ತೆರೆಯುವ ಅವಶ್ಯಕತೆ ಇರುವುದನ್ನು ಮನವರಿಕೆ ಮಾಡಿಕೊಡಲಾಯಿತು.
ಈಚಿನ ದಿನಗಳಲ್ಲಿ ಠೇವಣಿ ರಹಿತವಾಗಿ ಬ್ಯಾಂಕ್ ಖಾತೆ ತೆರೆಯಬಹುದು. ವ್ಯವಹಾರ ಪ್ರತಿನಿಧಿಗಳ ಮೂಲಕ ತಮ್ಮ ತಮ್ಮ ಗ್ರಾಮಗಳಲ್ಲಿ ನಿಮ್ಮ ಮನೆ ಬಾಗಿಲಲ್ಲೇ ಬ್ಯಾಂಕ್‌ನ ವ್ಯವಹಾರವನ್ನೂ ಮಾಡಬಹುಗು ಎಂಬುದಾಗಿ ರಘುನಾಥ ರಾವ್ ತಾಪ್ಸೆ ಜನರಲ್ಲಿ ಅರಿವು ಮೂಡಿಸಿದರು.
ಗ್ರಾಮದ ಕೆನರಾ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಪಿ. ಭಾಸ್ಕರ, ಸುರೇಶ, ಗ್ರಾಮೀಣ ಸ್ವಉದ್ಯೋಗ ತರ ಬೇತಿ ಕೇಂದ್ರದ ಮಮತಾ ಸಾಕ್ಷರತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments