ಸೂಳೆಕೆರೆ ಅಭಿವೃದ್ಧಿಗೆ ಬಜೆಟ್ನಲ್ಲಿ ಹಣ
ಚನ್ನಗಿರಿ: ತಾಲೂಕಿನ ಪ್ರಸಿದ್ಧ ಸೂಳೆಕೆರೆಯನ್ನು ಸದಾ ತುಂಬಿರುವಂತೆ ಮಾಡಲು ಮತ್ತು ಇತರೆ ಯೋಜನೆ ಸೇರಿದಂತೆ ಬಜೆಟ್ನಲ್ಲಿ ರು. 650ಕೋಟಿ ಕಾಯ್ದಿರಿಸಲಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸೂಳೆಕೆರೆಯಿಂದ ಚಿತ್ರದುರ್ಗ, ಹೊಳಲ್ಕೆರೆ, ಜಗಳೂರುಗಳಿಗೆ ಕುಡಿಯಲು ನೀರು ತೆಗೆದುಕೊಂಡು ಹೋಗಿದ್ದು, ್ತ ಚನ್ನಗಿರಿ ಪಟ್ಟಣ ಸೇರಿದಂತೆ 70ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಗೆ ಕಾಮಗಾರಿ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು. ಈ ಕೆರೆಯ ಅಚ್ಚುಕಟ್ಟು ಪ್ರದೇಶಕ್ಕೆ 5ಸಾವಿರ ಹೆಕ್ಟೇರ್ ಪ್ರದೇಶ ಒಳಪಡುತ್ತದೆ ಈ ಎಲ್ಲವಕ್ಕೂ ನೀರು ಭರಿಸಲು ಕೆರೆಯಲ್ಲಿ ಜಲ ಸಂಪನ್ಮೂಲದ ಕೊರತೆ ನೀಗಿಸಲು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಇದಕ್ಕೆ ಬೇಕಾದ ಹಣ ತೆಗೆದಿರಿಸಲಾಗಿದೆ ಎಂದರು. ಪಪಂ ಸದಸ್ಯ ಎಂ.ಬಿ. ರಾಜಪ್ಪ, ಶಬ್ಬೀರ್ ಖಾನ್, ರಹಮತ್ತುಲ್ಲಾ ಖಾನ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.