ಬೆಂಕಿ ಆಕಸ್ಮಿಕ: ಸಂತ್ರಸ್ತರಿಗೆ ಪರಿಹಾರ
ಹೊನ್ನಾಳಿ: ಫೆ.12ರಂದು ನ್ಯಾಮತಿಯ ಶಿವಾನಂದಪ್ಪ ಬಡಾವಣೆಯಲ್ಲಿ ಬೆಂಕಿ ಆಕಸ್ಮಿಕದಿಂದ ಮನೆಗಳು ಸಂಪೂರ್ಣ ಸುಟ್ಟು ಮನೆಯಲ್ಲಿದ್ದ ಬಟ್ಟೆ, ಪಾತ್ರೆ ಇತರೆ ಎಲ್ಲಾ ವಸ್ತುಗಳು ಸಂಪೂರ್ಣ ಸುಟ್ಟು ಸುಮಾರು 18 ಕುಟುಂಬಗಳು ಅಕ್ಷರಶಃ ಬೀದಿಪಾಲಾಗಿದೆ. ಈ ಕುಟುಂಬಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆ ಸಂಸ್ಥೆ ಪ್ರತೀ ಕುಟುಂಬಕ್ಕೆ ರು. 15 ಸಾವಿರದಂತೆ ಎಲ್ಲಾ 18 ಕುಟುಂಬಗಳಿಗೆ ರು. 2.70 ಲಕ್ಷದ ಚೆಕ್ಗಳನ್ನು ವಿತರಿಸಲಾಗುತ್ತಿದೆ ಎಂದು ಧಾರವಾಡದ ಪ್ರಾದೇಶಿಕ ನಿರ್ದೇಶಕ ರವಿಶಂಕರ ಶರ್ಮಾ ತಿಳಿಸಿದರು.
ಚೆಕ್ ವಿತರಣಾ ಸಮಾರಂಭವನ್ನು ನ್ಯಾಮತಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಶಿವರಾಂ ನಾಯ್ಕ ಉದ್ಘಾಟಿಸಿದರು. ನ್ಯಾಮತಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜೇಶ್ವರಿ ರಂಗಪ್ಪ ಎಸ್.ಎಸ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ದಾವಣಗೆರೆ ಜಿಲ್ಲಾ ವಿಭಾಗದ ನಿರ್ದೇಶಕ ಜಿ. ಚಂದ್ರಶೇಖರ್, ನ್ಯಾಮತಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಜಗದೀಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಹೊನ್ನಾಳಿ ತಾಲೂಕು ನಿರ್ದೇಶಕ ಜಯಕರ ಶೆಟ್ಟಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮನೆಗಳನ್ನು ಕಳೆದುಕೊಂಡಿದ್ದ ಕುಟುಂಬ ವರ್ಗದವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.