ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದಾವಣಗೆರೆ

ಮತ ನೀಡಿದವರ ಮರೆವುದೇ ಕಾಯಕ: ಟೀಕೆ

Parashurama
Updated On : 14 Feb 2013, 10:56 am

ಹೊನ್ನಾಳಿ: ಎಲ್ಲಾ ಪಕ್ಷಗಳು ಅಧಿಕಾರಕ್ಕೆ ಬರುವ ಮೊದಲು ಜನತೆಯ ಅನೇಕ ರೀತಿಯ ಭರವಸೆಗಳನ್ನು ನೀಡುತ್ತವೆ. ಅಧಿಕಾರಕ್ಕೆ ಬಂದ ನಂತರ ಮತ ನೀಡಿದವರನ್ನೇ ಮರೆಯುವ ಕೆಲಸ ನಿರಂತರವಾಗಿ ನಡೆದುಕೊಂಡು ಬರುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಎಸ್.ಎಸ್ ಹೇಳಿದರು.
ಬುಧವಾರ ವೇದಿಕೆಯಿಂದ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ನಡೆಸಿದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಮತದಾರರು ಮುಂದಿನ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಹಣ, ಹೆಂಡ ಹಾಗೂ ಇತರೆ ಯಾವುದೇ ಅಮಿಷಗಳಿಗೆ ಬಲಿಯಾಗದೆ ನಿಜವಾದ ಜನಪರ ಕಾಳಜಿವುಳ್ಳ ಜನರೊಂದಿಗೆ ಸದಾ ಬೆರೆಯವ  ಗುಣವುಳ್ಳ ಉತ್ತಮ ವ್ಯಕ್ತಿಯನ್ನು ತಮ್ಮ ಅಮೂಲ್ಯ ಮತ ನೀಡುವ ಮೂಲಕ ಆಯ್ಕೆ ಮಾಡಬೇಕು ಎಂದರು.
ಜನತೆಗೆ ನೀಡಿದ್ದು ಹಗರಣ: ರಾಜ್ಯದಲ್ಲಿ ಕಳೆದ ನಾಲ್ಕೂವರೆ ವರ್ಷಗಳಿಂದ ಆಧಿಕಾರ ನಡೆಸಿದ ಬಿಜೆಪಿ ಸರ್ಕಾರ ಜನಪರ ಕೆಲಸಗಳಿಗಿಂತ ಅಧಿಕಾರ ಪರ ಭಿನ್ನಾಭಿಪ್ರಾಯಗಳು, ಇತರೆ ಹಗರಣಗಳನ್ನೇ ಜನತೆಗೆ ನೀಡಿದೆ ಎಂದು ಆರೋಪಿಸಿದರು.
ಅಧಿಕಾರಕ್ಕೆ ಬರುವ ಎಲ್ಲಾ ಸರ್ಕಾರಗಳು ಕೇವಲ ಅಧಿಕಾರಕ್ಕಾಗಿ ಅಸಹಕಾರ, ಕಿತ್ತಾಟಗಳನ್ನು ನಡೆಸಿಕೊಂಡು  ಬಂದಿರುವುದನ್ನು ಕಂಡಿರುವ ಈ ರಾಜ್ಯದ ಜನತೆ ಅಭಿವೃದ್ಧಿಶೀಲ ಸರ್ಕಾರದ ನಿರೀಕ್ಷೆಯಲಿದ್ದಾರೆ ಎಂದರು
ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ  ಸಮರ್ಪಕ ವಿದ್ಯುತ್ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದ ಎಂದು ಎಚ್ಚರಿಸಿದರು.
ಸ್ಥಳೀಯ ಟಿ.ಬಿ. ವೃತ್ತದಿಂದ ನೂರಾರು ಜನ ಯುವಕರು ಪ್ರತಿಭಟನಾ ಮೆರವಣಿಗೆ ನಡೆಸಿಕೊಂಡು ತಾಲೂಕು ಕಚೇರಿಗೆ ಆಗಮಿಸಿ ಸಾರ್ವಜನಿಕ ಸಭೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಉಪಾಧ್ಯಕ್ಷೆ ಚೀಲೂರು ಲೋಕೇಶ್, ತಾಲೂಕು ಕಾರ್ಯಾಧ್ಯಕ್ಷ ಮಂಜುನಾಥ್ ಎಚ್.ಯು. ಸಂಚಾಲಕ  ಚೀಲೂರು ಬಾಬು, ಜೀನದತ್, ಪ್ರಕಾಶ್ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments