ದಾವಣಗೆರೆ

'ರೈತರನ್ನು ಒಕ್ಕಲೆಬ್ಬಿಸಬೇಡಿ'

ಹರಪನಹಳ್ಳಿ: ಪವನ ವಿದ್ಯುತ್ ಯಂತ್ರ ಅಳವಡಿಸಲು ಸಾಗುವಳಿ ಮಾಡುತ್ತಿರುವ ಬಗರ್‌ಹುಕ್ಕುಂ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಅಧಿಕಾರಿಗಳ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ಕಚೇರಿ ಎದುರು ಬಹಿರಂಗ ಸಭೆ ನಡೆಸಿದ ಪ್ರತಿಭಟನಾಕಾರರು ಬಗರ್‌ಹುಕ್ಕುಂ ಭೂಮಿ ಜಂಟಿ ಸರ್ವೆ ಮಾಡಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.
 ಪ್ರತಿಭಟನೆ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ಮಾತನಾಡಿ, ತಾಲೂಕಿನಲ್ಲಿ 18 ಸಾವಿರ ಹೆಕ್ಟೆರ್ ಭೂಮಿ ಬಗರ್‌ಹುಕ್ಕುಂ ಸಾಗುವಳಿಗೆ ಒಳಪಟ್ಟಿದೆ. ಈ ಭೂಮಿಯನ್ನು ಸರ್ಕಾರ ಸೆಕ್ಷನ್ 4 ಕ್ಕೆ ಸೇರಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಆದರೆ ಅರಣ್ಯ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು  ರೈತರನ್ನು ಒಕ್ಕಲೆಬ್ಬಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ದೂರಿದರು.
ಉಚ್ಚಂಗಿದುರ್ಗ- 399, ಇ1 ಕಾಂಭಟ್ರಹಳ್ಳಿ ಸರ್ವೇ ನಂಬರ್-1, ಅನಂತನಹಳ್ಳಿ-40, ಮಾಚಿಹಳ್ಳಿ ಭೂಮಿ-389, ಹರಪನಹಳ್ಳಿ-492 ಹಾಗೂ 490(ಬಿ) ಸರ್ವೇ ನಂಬರುಗಳ ಭೂಮಿಗಳನ್ನು ಜಂಟಿ ಸರ್ವೇ ಮಾಡಿ ಬಗರ್‌ಹುಕ್ಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ನ್ಯಾಯ ಒದಗಿಸಿಕೊಡಬೇಕು. ಬೇಡಿಕೆ ಈಡೇರಿಸದೆ ಜಮೀನು ವಶಪಡಿಸಿಕೊಳ್ಳಲು ಮುಂದಾದರೆ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!