ದಾವಣಗೆರೆ

ಪೌಷ್ಟಿಕತೆ ಕುರಿತು ಅರಿವು ಅಗತ್ಯ

ಹೊನ್ನಾಳಿ: ತಾಯಂದಿರು ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಸೇವನೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಮನೆಗಳಲ್ಲಿಯೇ ಸ್ಥಳೀಯವಾಗಿ ಲಭ್ಯವಾಗುವ ಆಹಾರ ಪದಾರ್ಥಗಳನ್ನು ಬಳಿಸಿಕೊಂಡು ಪೌಷ್ಟಿಕ ಆಹಾರ ತಯಾರಿಕೆ ಬಗ್ಗೆ ಸ್ತ್ರೀಶಕ್ತಿ ಗುಂಪುಗಳು, ಅಂಗನವಾಡಿ ಕಾರ್ಯಕರ್ತೆಯರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ಆಧಿಕಾರಿ ರಷೀದುನ್ನಿಸ್ಸಾ ಹೇಳಿದರು.
ಕಾಯಕ್ರಮದಲ್ಲಿ ಅಬರಗಟ್ಟ ವೃತ್ತದ ಮೂರು ಮೂರು ಗ್ರಾಮಗಳ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಬಾಲ್ಯ ವಿವಾಹ, ಬಾಣಂತಿ ಹಾಗೂ ಆಪೌಷ್ಟಿಕತೆಯಿಂದ ನರಳುವ ಮಕ್ಕಳ ಆರೈಕೆ ಕುರಿತಂತೆ ಪ್ರಾತ್ಯಕ್ಷಿಕೆ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಹಾಲು, ಮೊಟ್ಟೆ ಹಾಗೂ 3 ರಿಂದ 6 ವರ್ಷದೊಳಿಗಿನ ಮಕ್ಕಳಿಗೆ ಕೂಡ ಹಾಲು ವಿತರಣೆ  ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ಶಶಿಕಲಾ ಆರೋಗ್ಯ ಕಾರ್ಯಕರ್ತೆ ಮೀನಾಕ್ಷಿ ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಅಂಗನವಾಡಿ ಕಾರ್ಯಕರ್ತೆಯರಾದ ಇಂದಿರಮ್ಮ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!