ದಾವಣಗೆರೆ

ಆನಗೋಡು ಮೃಗಾಲಯಕ್ಕೆ ರು.34 ಲಕ್ಷ


ದಾವಣಗೆರೆ
: ತಾಲೂಕಿನ ಆನಗೋಡು ಗ್ರಾಮದ ಇಂದಿರಾ ಪ್ರಿಯದರ್ಶಿನಿ ಪ್ರಾಣಿ ಸಂಗ್ರಹಾಲಯ(ಝೂ)ಕ್ಕೆ ಭೇಟಿ ನೀಡಿದ್ದ ಸಂಸದ ಜಿ.ಎಂ. ಸಿದ್ದೇಶ್ವರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
 ಆನಗೋಡು ಪ್ರಾಣಿ ಸಂಗ್ರಹಾಲಯಕ್ಕೆ ಕೆಲ ತಿಂಗಳ ಹಿಂದೆಯೇ ಭೇಟಿ ನೀಡಿದ್ದ ಸಂಸದ ಸಿದ್ದೇಶ್ವರ, ಇಲ್ಲಿರುವ ಹೆಣ್ಣು ಕರಡಿಗೆ ಜೋಡಿ ಕಲ್ಪಿಸಲು ಹೇಳಿದ್ದರೂ ಈವರೆಗೆ ಮಾಡದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
 ಕರಡಿಯನ್ನು ನಾನು ದತ್ತು ತೆಗೆದುಕೊಳ್ಳುವುದಾಗಿ ಈ ಹಿಂದೆಯೇ  ಹೇಳಿದ್ದೇನೆ. ಆದರೆ, ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಕರಡಿಯನ್ನು ದತ್ತು
ಪಡೆಯಲು ನಿಗದಿಪಡಿಸಿರುವ 35 ಸಾವಿರ ರು.ಗಳನ್ನು ನೀಡಿ, ಕರಡಿ ದತ್ತು ಪಡೆಯುತ್ತೇನೆ. ಇದಕ್ಕೆ ಬೇಕಾದ ಪ್ರಕ್ರಿಯೆಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಅವರು ಸೂಚಿಸಿದರು.
ಮೈಸೂರಿನಿಂದ ಕರಡಿ: ಉಪ ಅರಣ್ಯ ಸಂರಕ್ಷಣಾಧಿಕಾರಿ ಮಳವಳ್ಳಿ ಮಾತನಾಡಿ, ರಾಜ್ಯ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದಿಂದ 34 ಲಕ್ಷ ಹೆಚ್ಚುವರಿ ಹಣ ಬಿಡುಗಡೆಯಾಗಿದೆ. ಆನಗೋಡು ಪ್ರಾಣಿ ಸಂಗ್ರಹಾಲಯ ಹೊಂದಿರುವ ಹೆಣ್ಣು ಕರಡಿಗೆ ತುಂಬಾ ದಿನಗಳಿಂದ ಜೋಡಿ ಇರಲಿಲ್ಲ. ಶೀಘ್ರದಲ್ಲೇ ಮೈಸೂರು ಪ್ರಾಣಿ ಸಂಗ್ರಹಾಲಯದಿಂದ ಗಂಡು ಕರಡಿಯನ್ನು ತರುವ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಸದರ ಗಮನಕ್ಕೆ ತಂದರು.
ಶಾಸಕ, ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಬಸವರಾಜನಾಯ್ಕ, ಜಿಲ್ಲಾಧಿಕಾರಿ ಸುಭಾಷ್ ಶಿವಪ್ಪ ಪಟ್ಟಣಶೆಟ್ಟಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೇಮಚಂದ್ರ, ಹಾಲೇಶಪ್ಪ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ