ದಾವಣಗೆರೆ

ವಿಧಾನಸಭೆ ಚುನಾವಣೆಗೆ ದಿಕ್ಸೂಚಿ

ಕ.ಪ್ರ.ವಾರ್ತೆ ದಾವಣಗೆರೆ ಮಾ.7
ದಾವಣಗೆರೆ ಪಾಲಿಕೆಯಲ್ಲಿ 41 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದ್ದು, ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದರು.
ನಗರದ ಎಂಸಿಸಿ ಬಿ ಬ್ಲಾಕ್‌ನ ಐಎಂಎ ಹಾಲ್ ಮತಗಟ್ಟೆಯಲ್ಲಿ ಪಾಲಿಕೆ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಗರಸಭೆಯಲ್ಲಿ ಅತೀ ಹೆಚ್ಚು ಸ್ಥಾನ ಗಳಿಸುವ ಮೂಲಕ ಅಧಿಕಾರಕ್ಕೆ ಬಂದಂತೆ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಜನಹಿತ ಕಡೆಗಣನೆ: ಪಾಲಿಕೆಯಲ್ಲಿ 5 ವರ್ಷ ಆಳ್ವಿಕೆ ನಡೆಸಿದ ಬಿಜೆಪಿ ಭ್ರಷ್ಟಾಚಾರ, ಹಗರಣ ಮಾಡುತ್ತಾ, ಜನರ ಹಿತವನ್ನೇ ಕಡೆಗಣಿಸಿತು. ಬಿಜೆಪಿ ಆಡಳಿತದಿಂದ ಬೇಸತ್ತ ಮತದಾರರು ಮತ್ತೆ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರಲು ನಿಶ್ಚಿಯಿಸಿ, ಮತ ಚಲಾಯಿಸಿದ್ದಾರೆ ಎಂಬ ನಂಬಿಕೆ ನಮ್ಮದು. ಪಾಲಿಕೆಯಲ್ಲಿ 41 ಸ್ಥಾನಗಳನ್ನೂ ಕಾಂಗ್ರೆಸ್ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಪರವಾದ ಅಲೆ ಕಂಡು ಬರುತ್ತಿದೆ. ಜೆಡಿಎಸ್‌ನಲ್ಲಿರುವ   ಮೂವರೂ ಮೂರು ತರಹ ಮಾತನಾಡುತ್ತಾರೆ ಎಂದು ಅವರು ವ್ಯಂಗ್ಯವಾಡಿದರು.
ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತಿಗೆ ಮಾ.11ರಂದು ಬರುವ ಫಲಿತಾಂಶವೇ ಉತ್ತರ ಹೇಳಲಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ದಾವಣಗೆರೆ ಸೇರಿದಂತೆ ಜಿಲ್ಲಾದ್ಯಂತ ಶಾಂತಿ, ಸುವ್ಯವಸ್ಥೆಯಿಂದ ಚುನಾವಣೆ ನಡೆಯುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಕೆಲಮೊಂದು ಲೋಪ, ದೋಷ ಕೇಳಿ ಬಂದರೂ, ಚುನಾವಣೆ ಪ್ರಕ್ರಿಯೆ ಮಾತ್ರ ಅತ್ಯಂತ ಸುವ್ಯವಸ್ಥಿತವಾಗಿ, ಶಾಂತಿಯಿಂದ ನಡೆದಿರುವುದು ಎಲ್ಲರಿಗೂ ಅಭಿನಂದಿಸುವುದಾಗಿ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್