ವಕೀಲರ ಮೇಲಿನ ಹಲ್ಲೆ ಖಂಡಿಸಿ ಮನವಿ
ಹೊನ್ನಾಳಿ: ದೇಶದ ಜೈಪುರ ಮತ್ತು ಚಂಡೀಘಡದಲ್ಲಿ ವಕೀಲರ ಮೇಲೆ ಅಲ್ಲಿನ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ ಶುಕ್ರವಾರ ತಾಲೂಕು ವಕೀಲರ ಸಂಘದಿಂದ ಸ್ಥಳೀಯ ನ್ಯಾಯಾಲಯದ ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಕಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ಗೆ ಮನವಿ ಅರ್ಪಿಸಿದರು. ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಶುಕ್ರವಾರ ತಾಲೂಕಿನ ವಕೀಲರು ನ್ಯಾಯಾಲಯ ಕಲಾಪವನ್ನು ಬಹಿಷ್ಕರಿಸುವ ಮೂಲಕ ಹಲ್ಲೆ ಘಟನೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ಯತಿರಾಜ್, ಉಮಾಕಾಂತ್ ಜೋಯ್ಸ್, ಪ್ರಕಾಶ್, ಉಮೇಶ್, ನುಚ್ಚಿನ ವೀರಪ್ಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.