ಕಾಂಗ್ರೆಸ್ ನಾಗಾಲೋಟ ಮುಂದುವರಿಯಲಿದೆ
ದಾವಣಗೆರೆ: ದಾವಣಗೆರೆ ಪಾಲಿಕೆಯ 41 ವಾರ್ಡ್ಗಳ ಪೈಕಿ 36 ವಾರ್ಡ್ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವ ಜಯ ದಾಖಲಿಸಿದ್ದು, ಇದು ಮಹಾ ನಗರದ ಜನತೆಯ ಗೆಲುವಾಗಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಸ್ಸೆಸ್ ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದರು.
ನಗರದ ತಮ್ಮ ನಿವಾಸದಲ್ಲಿ ಸೋಮವಾರ ಪಕ್ಷದ ಜಯದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಾಗಿದ್ದ ಮೂವರು ಅಭ್ಯರ್ಥಿಗಳು ಪಕ್ಷಕ್ಕೆ ಮರಳಲಿದ್ದಾರೆ. ಬಿಜೆಪಿ ಅಭ್ಯರ್ಥಿಯೂ ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೂ ಅಚ್ಚರಿ ಇಲ್ಲ ಎಂದರು.
ಮಿತ್ರಪಕ್ಷವಾದ ಸಿಪಿಐ ಅಭ್ಯರ್ಥಿ ಆವರಗೆರೆ ಎಚ್.ಜಿ. ಉಮೇಶ್ ಸಹ ನಮ್ಮವರೆ. ಸಿಪಿಐ ಅಭ್ಯರ್ಥಿಯೂ ನಮಗೆ ಬೆಂಬಲಿಸುವ ವಿಶ್ವಾಸವಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ನಗರ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶವು ದಿಕ್ಸೂಚಿಯಾಗಿದೆ. ಪಾಲಿಕೆಯಲ್ಲಿ ಸುಮಾರು 400 ಕೋಟಿ ವಿಶೇಷಾನುದಾನ ಸೇರಿದಂತೆ ಹಲವಾರು ಅನುದಾನದಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿ, ಮಹಾ ನಗರದ ಅಭಿವೃದ್ಧಿ, ಜನಹಿತ ಮರೆತ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಅವರು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.