ದಾವಣಗೆರೆ: ನಗರದ ರೋಟರಿ ಬಾಲಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಯೂತ್ ಫಾರ್ ನೇಷನ್ ವತಿಯಿಂದ ಅಪರೂಪದ ನಾಣ್ಯಗಳ ಪ್ರದರ್ಶನವನ್ನು ಆ.15 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ರಾಜ್ಯ ಉಪಾಧ್ಯಕ್ಷ ಡಿ.ಟಿ. ಸುಧೀಂದ್ರಕುಮಾರ ತಿಳಿಸಿದರು.
ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ “@ÈÚßàÄÀ OÛM^Ûy’ ಹೆಸರಿನಲ್ಲಿ ನಾಣ್ಯ ಪ್ರದರ್ಶನ ಆಯೋಜಿಸಲಾಗಿದೆ ಎಂದು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ನಾಣ್ಯ ಸಂಗ್ರಹಕಾರರು ತಮ್ಮ ಸಂಗ್ರಹದಲ್ಲಿ ಇರುವ ನಾಣ್ಯಗಳನ್ನು ಸಾರ್ವಜನಿಕ ವೀಕ್ಷಣೆಗೆ ತರಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ. 93437- 91929, 95382- 58856, 97403- 48226 ಇಲ್ಲಿಗೆ ಸಂಪರ್ಕಿಸಬಹುದು.
ನಾಣ್ಯ ಸಂಗ್ರಹಿಸುವ ಹವ್ಯಾಸ ಹೊಂದಿದವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಣ್ಯ ವೀಕ್ಷಣೆಗೆ ಉಚಿತ ಪ್ರವೇಶಾವಕಾಶವಿದೆ. ನಾಣ್ಯ ಸಂಗ್ರಹಕಾರರು, ವಿದ್ಯಾರ್ಥಿ, ಯುವ ಜನರು, ಸಾರ್ವಜನಿಕರು ಪ್ರದರ್ಶನಕ್ಕೆ ಆಗಮಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದರು.
ಸಂಸ್ಥೆಯ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಎಸ್.ಎಚ್. ನವೀನ್, ಉಪಾಧ್ಯಕ್ಷ ಮಂಜುನಾಥ, ಕರಿಬಸವರಾಜ ಇದ್ದರು.