ದಾವಣಗೆರೆ

ಉಪನ್ಯಾಸಕರ ವರ್ಗಾವಣೆ ವಿದ್ಯಾರ್ಥಿಗಳ ಪ್ರತಿಭಟನೆ

ಹರಪನಹಳ್ಳಿ: ಕಾಲೇಜಿನ ಉಪನ್ಯಾಸಕರನ್ನು ಬೇರೆಡೆ ವರ್ಗಾವಣೆಗೊಳಿಸಿರುವ ಸಿರಿಗೆರೆ ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕ್ರಮ ವಿರೋಧಿಸಿ ಎಸ್‌ಎಫ್‌ಐ ಸಂಘಟನೆ ನೇತೃತ್ವದಲ್ಲಿ ಎಚ್‌ಪಿಎಸ್ ಕಾಲೇಜು ವಿದ್ಯಾರ್ಥಿಗಳು ಬುಧವಾರ ದಿಢೀರ್ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಬೆಳಗ್ಗೆ ಕಾಲೇಜು ಆರಂಭವಾಗುತ್ತಿದ್ದಂತಿಯೇ ತರಗತಿ ಬಹಿಷ್ಕರಿಸಿದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಕಾಲೇಜು ಬಳಿ ಪ್ರತಿಭಟನೆ ನಡೆಸಿದರು. ನಂತರ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಎಸ್‌ಎಫ್‌ಐ ಅಧ್ಯಕ್ಷ ಕೆ.ಚವ್ಹಾಣ್ ಕುಮಾರ್ ಮಾತನಾಡಿ, ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಕಾಲೇಜಿನ ಬೋಧಕ ಸಿಬ್ಬಂದಿಯನ್ನು ಆಡಳಿತ ಮಂಡಳಿ ಬೇಕಾಬಿಟ್ಟಿಯಾಗಿ ವರ್ಗಾವಣೆ ಮಾಡಿದೆ. ಈಗಾಗಲೇ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದಿದೆ. ಇನ್ನೇನು ತಿಂಗಳ ಅಂತ್ಯಕ್ಕೆ ಮಧ್ಯವಾರ್ಷಿಕ ಪರೀಕ್ಷೆಗಳು ಬರಲಿದ್ದು, ಇಂಥ ಸಂದರ್ಭದಲ್ಲಿ ಬೋಧಕ ಸಿಬ್ಬಂದಿ ಏಕಾಏಕಿ ವರ್ಗಾವಣೆ ಮಾಡುವ ಮೂಲಕ ಸಂಸ್ಥೆ ಆಡಳಿತ ಮಂಡಳಿ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದೆ ಎಂದು ದೂರಿದರು.
ಕಾಲೇಜಿನ ವಾಣಿಜ್ಯ ವಿಭಾಗದ ವಾಣಿಜ್ಯಶಾಸ್ತ್ರ ಉಪನ್ಯಾಸ ಅಹಮ್ಮದ್ ಸಾಹೇಬ್ ಸೇರಿದಂತೆ ಈಗಾಗಲೇ  ಉಪನ್ಯಾಸಕರನ್ನು ಆಡಳಿತ ಮಂಡಳಿ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಿದೆ. ಇನ್ನೂ ಕೆಲವರು ವರ್ಗಾವಣೆ ಭೀತಿ ಎದುರಿಸುತ್ತಿದ್ದಾರೆ. ಕೂಡಲೇ ವರ್ಗಾವಣೆ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಮುಖಂಡ ಈಶ್ವರನಾಯ್ಕ, ಡಿವೈಎಫ್‌ಐ ಮುಖಂಡ ಬೇವಿನಹಳ್ಳಿ ವೆಂಕಟೇಶ್, ಮುಖಂಡರಾದ
ಹನುಮಂತ, ಮಂಜುನಾಥ, ಕರಿಬಸಪ್ಪ, ರಾಘವೇಂದ್ರ, ತಾಸೀನ್, ನರೇಂದ್ರ, ವಾಸೀಮ್, ವಿಜಯ್, ಪರಮೇಶ್, ಲತಾ, ಗೌತಮಿ, ಸುಜಾತಾ, ಮೀನಾಕ್ಷಿ, ತನುಜಾ, ಡಿ. ಗಂಗಮ್ಮ, ಲಕ್ಷ್ಮೀ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel