ಚನ್ನಗಿರಿ: ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಸಮ್ಮೇಳನವು ಆಗಸ್ಟ್ 21 ರಿಂದ 23ರವರೆಗೆ ಮೈಸೂರಿನಲ್ಲಿ ನಡೆಯಲಿದ್ದು ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಬರಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಿ. ಜಯರಾಮ್ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ಸಮ್ಮೇಳನದಲ್ಲಿ ನೌಕರರಿಗೆ ಸಂಬಂಧಪಟ್ಟಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳಲ್ಲಿನ ವ್ಯತ್ಯಾಸ ಸರಿಪಡಿಸುವುದು, ವಿವಿಧ ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ, ನಿಗದಿತ ಸಮಯದಲ್ಲಿ ವೇತನ ಪಾವತಿ, ನೌಕರರ ವರ್ಗಾವಣೆ ಬಗ್ಗೆ ಸೂಕ್ತ ಕಾಯ್ದೆ ರೂಪಿಸುವ ಇಂತಹ ವಿಚಾರಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚಿಸಿ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಈ ವಿಚಾರ ಸಂಕಿರಣ ನಡೆಯಲಿದೆ. ಸಮ್ಮೇಳನ ನಡೆಯುವ 3 ದಿನಗಳಲ್ಲಿ ಸರ್ಕಾರವು ಸರ್ಕಾರಿ ನೌಕರರಿಗೆ ಸಾಂದರ್ಭಿಕ ರಜೆ ನೀಡಲಿದೆ. ತಾಲೂಕಿನ ವಿವಿಧ ಇಲಾಖೆಗಳಲ್ಲಿನ ನೌಕರರು ನಿಗದಿತ ಶುಲ್ಕವಾಗಿ 300 ನೀಡಬೇಕೆಂದು ತಿಳಿಸಿದರು.
ಉಪಾಧ್ಯಕ್ಷ ಜಯಣ್ಣ, ನಿರ್ದೆಶಕರಾದ ಎಚ್.ಡಿ. ನಾಗರಾಜ್, ಗಜೇಂದ್ರಪ್ಪ, ಶೇಖರಪ್ಪ ಉಪಸ್ಥಿತರಿದ್ದರು.