ದಾವಣಗೆರೆ

ಗ್ರಾಪಂ ನೌಕರರ ಧರಣಿ ಆರಂಭ

ಜಗಳೂರು:  ಸರ್ಕಾರ ನಿಗದಿಪಡಿಸಿದ ವೇತನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ತಾಲೂಕು ಘಟಕದ ನೇತೃತ್ವದಲ್ಲಿ ಗ್ರಾಪಂ ನೌಕರರು ಇಲ್ಲಿನ ತಾಪಂ ಕಚೇರಿ ಎದುರು ಗುರುವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ತಾಲೂಕು ಕೇಂದ್ರದ ಪ್ರಮುಖ ಮಾರ್ಗಗಳ ಮೂಲಕ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ತಾಲೂಕು ಪಂಚಾಯಿತಿ ಕಚೇರಿ ತಲುಪಿ, ಅನಿರ್ಧಿಷ್ಟಾವದಿ ಧರಣಿ ನಡೆಸಿದರು.
ಸಂಘದ ಗೌರವಾಧ್ಯಕ್ಷ ಆರ್. ಓಬಳೇಶ್ ಮಾತನಾಡಿ, ಗ್ರಾಪಂಗಳಲ್ಲಿ ಕಾರ್ಯನಿರ್ವಹಿಸುವ ಬಿಲ್ ಕಲೆಕ್ಟರ್, ಪಂಪ್ ಆಪರೇಟರ್, ವಾಟರ್‌ಮನ್, ಜವಾನರು, ಕಸ ಗುಡಿಸುವವರಿಗೆ ಸರ್ಕಾರ ನಿಗದಿಪಡಿಸಿದಷ್ಟೇ ವೇತನ ನೀಡಬೇಕು. ಬಾಕಿ ಉಳಿಸಿಕೊಂಡ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಹಾಗೂ 5 ವರ್ಷ ಸೇವೆ ಸಲ್ಲಿಸಿದ ಪಂಪ್ ಆಪರೇಟರ್‌ಗಳಿಗೆ ಬಿಲ್ ಕಲೆಕ್ಟರ್ ಹುದ್ದೆಗೆ ಬಡ್ತಿ ನೀಡು ವಂತೆ ಸರ್ಕಾರ 2008ರಲ್ಲೇ ಆದೇಶ ಹೊರಡಿಸಲಾಗಿದೆ. ಆದರೆ, ಈವರೆಗೆ ಅದನ್ನು ಜಾರಿಗೊಳಿಸದೆ, ನೇರ ನೇಮಕಾತಿಗೆ ಕೆಲವು ಗ್ರಾಪಂಗಳು ಮುಂದಾಗಿರುವುದು ಸರಿಯಲ್ಲ. ಈ ಅಕ್ರಮ ತಡೆಗಟ್ಟಲು ಸಂಬಂಧಿಸಿದ ಪಿಡಿಒ, ಕಾರ್ಯದರ್ಶಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರದ ಆದೇಶ ಉಲ್ಲಂಘಿಸುವ ಹಾಗೂ ತಪ್ಪು ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಸಂಘದ ಪ್ರಮುಖ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಸರ್ಕಾರ ನಮ್ಮ ಬೇಡಿಕೆ ಸ್ಪಂದಿಸುವವರೆಗೂ ಅನಿರ್ಧಿಷ್ಟಾವದಿವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದು, ಸರ್ಕಾರ ಇನ್ನಾದರೂ ಗ್ರಾಪಂ ನೌಕರರ ವಿಚಾರದಲ್ಲಿ ಮಾನವೀಯತೆಯಿಂದ ಸ್ಪಂದಿಸಬೇಕು. ಕ್ಷೇತ್ರದ ಶಾಸಕರು ಸಹ ಈ ವಿಚಾರದ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ಮನವಿ ಮಾಡಿದರು.
ಸಂಘದ ತಾಲೂಕು ಅಧ್ಯಕ್ಷ ಟಿ.ಮಹಾಂತೇಶ, ಉಪಾಧ್ಯಕ್ಷ ಯಶವಂತಪ್ಪ, ಕಾರ್ಯದರ್ಶಿ ರಾಜಕುಮಾರ, ಖಜಾಂಚಿ ಶಿವಣ್ಣ, ಸದಸ್ಯರಾದ ಮಹಾಂತೇಶ, ಶ್ರೀನಿವಾಸ, ಮಂಜಣ್ಣ, ಮುನಿಯಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ

'ಮೋದಿ ವಿರೋಧಿ ಪ್ರತಿಭಟನೆಗಳಿಗೆ ಅಮೆರಿಕನ್ನರ ಆರ್ಥಿಕ ನೆರವು?'; Mary Millben ಸ್ಫೋಟಕ ಆರೋಪ!

‘ಮೋದಿಗೆ ಅಮೆರಿಕ ಬೇಕಿಲ್ಲ, ಆದರೆ ಅಮೆರಿಕಕ್ಕೆ ಮೋದಿ ಬೇಕು'.. 'ನಿಮ್ಮನ್ನು ಬಳಸಿಕೊಂಡು ಕೈ ಬಿಡುತ್ತಾರೆ': ಅಭಿಜಿತ್ ದೀಪ್ಕೆಗೆ ಹಾಲಿವುಡ್ ಗಾಯಕಿ ಎಚ್ಚರಿಕೆ

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)