ದಾವಣಗೆರೆ

ಜಾರ್ಜ್ ರಾಜಿನಾಮೆಗೆ ಒತ್ತಾಯ

ದಾವಣಗೆರೆ: ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ, ದೌರ್ಜನ್ಯ ತಡೆಯುವಲ್ಲಿ ವಿಫಲವಾದ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ, ಗೃಹ ಸಚಿವ ಟಿ.ಜೆ. ಜಾರ್ಜ್ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡಿತು. ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಸುಮಾರು ಹೊತ್ತಿನವರೆಗೆ ರಸ್ತೆ ತಡೆ ನಡೆಸಿ, ಅಲ್ಲಿಂದ ಉಪ ವಿಭಾಗಾಧಿಕಾರಿ ಕಚೇ ರಿವರೆಗೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ನಂತರ ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಅಣಬೇರು ಜೀವನಮೂರ್ತಿ, ಯಶವಂತರಾವ್ ಜಾಧವ್, ಕೃಷ್ಣಮೂರ್ತಿ ಪವಾರ್, ಶಿವಕುಮಾರ, ರಾಜನಹಳ್ಳಿ ಶಿವಕುಮಾರ ಪೈಲ್ವಾನ, ಪ್ರಭು ಕಲ್ಬುರ್ಗಿ, ಧನಂಜಯ ಕಡ್ಲೆಬಾಳ್, ಶ್ರೀನಿವಾಸ, ನಾಗರತ್ನ ನಾಯ್ಕ, ಸವಿತಾ ರವಿ, ಮಂಜುಳಾ , ಮಲ್ಲಮ್ಮ, ಗುರುನಾಥ, ಬಸವರಾಜ ಗುಬ್ಬಿ, ಜಯಣ್ಣ,. ರುದ್ರಮುನಿಸ್ವಾಮಿ, ಹೇಮಂತಕುಮಾರ, ಓಂಕಾರಪ್ಪ,  ಗೋಣೆಪ್ಪ, ಕಲ್ಲೇಶ, ಮನು, ಸೈಯದ್ ಶಾಹೀನ್, ಗೌಸ್, ಸೋಮೇಶ್ವರ ಸುರೇಶ, ವಕೀಲರಾದ ರಾಘವೇಂದ್ರ,. ಪ್ರಕಾಶ, ಹನುಮಂತಪ್ಪ, ಶಂಕರಗೌಡ ಬಿರಾದಾರ್, ಶಿವನಗೌಡ ಪಾಟೀಲ್, ಆನಂದ ಹಿರೇಮಠ, ಸೋಗಿ ಶಾಂತ, ಸಂತೋಷ ಪೈಲ್ವಾನ್, ಕಿರೀಟ್ ಸಿ. ಕಲಾಲ್, ಪಿಸಾಳೆ ಕೃಷ್ಣ, ಡಿ.ಎಲ್. ರಾಮಚಂದ್ರಪ್ಪ ಇತರರು ಇದ್ದರು. ನಂತರ ಉಪ ವಿಭಾಗಾಧಿಕಾರಿ ಡಾ. ಸಿ. ನಾಗರಾಜ ಮುಖಾಂತರ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!