ದಾವಣಗೆರೆ

ಬಂಧನ ವಿಳಂಬಕ್ಕೆ ಖಂಡನೆ

ಹೊನ್ನಾಳಿ:  ರಾಜ್ಯದಲ್ಲಿ ಒಂದೇ ದಿನದಲ್ಲಿ ಸುಮಾರು 10ಕ್ಕೂ ಹೆಚ್ಚು ಮಹಿಳೆಯರು, ಯುವತಿಯರು ಹಾಗೂ ಬಾಲಕಿಯರ ಮೇಲೆ ಅತ್ಯಾಚಾರ ನಡೆದರೂ ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಅಥವಾ ಆರೋಪಿಗಳನ್ನು ಬಂಧಿಸದೇ ಇರುವುದು ಖಂಡನಿಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಎ.ಬಿ. ಹನುಮಂತಪ್ಪ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಬಿಜೆಪಿ ತಾಲೂಕು ಘಟಕದ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಂದರ್ಭ ಮಾತನಾಡಿ ಅವರು, ರಾಜ್ಯದಲ್ಲಿ ಮಹಿಳೆಯರಿಗೆ ಸೂಕ್ತವಾದ ರಕ್ಷಣೆ ಒದಗಿಸುವಲ್ಲಿ ವಿಫಲರಾಗಿರುವ ಗೃಹ ಸಚಿವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದರು.
ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಪೊಲಿಸರೇ ರಕ್ಷಣೆ ನೀಡುತ್ತಿದ್ದರೂ ಗೃಹ ಸಚಿವರು ಮಾತ್ರ ಅಸಹಾಯಕರಂತೆ ವರ್ತಿಸುತ್ತಾ ತಮ್ಮ ಖಾತೆ ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ಗೃಹ ಸಚಿವ ಕೆ.ಜೆ. ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅತ್ಯಾಚಾರದ ಬಗ್ಗೆ ರಾಜ್ಯದ ಕೆಲವು ಸಚಿವರು ಹಗುರವಾಗಿ ಮಾತನಾಡಿ ಮಹಿಳೆಯರನ್ನು ಅವಮಾನಿಸಿದ್ದಾರೆ. ಆದ್ದರಿಂದ ಅಂತಹ ಸಚಿವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿ ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.
ತಾಲೂಕು ಬಿಜೆಪಿ ಮುಖಂಡ ಡಾ.ರಾಜ್‌ಕುಮಾರ್ ಮಾತನಾಡಿದರು. ತಹಸೀಲ್ದಾರರಿಗೆ ಮನವಿ ಅರ್ಪಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಿಜೆಪಿ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಪ್ರಕಾಶ್, ಸತ್ತಿಗೆ ಲೋಕೇಶ್, ಕರಿಸಿದ್ದಪ್ಪ, ಬಿಸಾಟಿ ಸುರೇಶ್ ಇನ್ನಿತರರು ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; 2 ದಿನಗಳ ಡೆಡ್‌ಲೈನ್‌!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ

SIR ವಿವಾದ: ಚುನಾವಣಾ ಆಯೋಗ, ಜ್ಞಾನೇಶ್ ಕುಮಾರ್​ಗೆ ಸುಪ್ರೀಂ ಕೋರ್ಟ್ ನೋಟಿಸ್; ರಾಹುಲ್ ಗಾಂಧಿಗೂ ತರಾಟೆ