ದಾವಣಗೆರೆ

ನೇತ್ರ ತಪಾಸಣೆ ಉಚಿತ ಶಿಬಿರ 26ರಂದು

ಚನ್ನಗಿರಿ:  ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜು.26ರಂದು ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ ಎಂದು ಹಿಂದೂಸ್ಥಾನ್ ಗ್ರೂಪ್‌ನ ಅಧ್ಯಕ್ಷ ರಘು ತಿಳಿಸಿದ್ದಾರೆ. ಶ್ರೀಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ, ಗೃಹ ರಕ್ಷಕ ದಳ, ಹಿಂದೂಸ್ಥಾನ್ ಗ್ರೂಪ್ಸ್, ಸಾರ್ವಜನಿಕ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ ಆಶ್ರಯದಲ್ಲಿ ಶಿಬಿರ ನಡೆಯಲಿದೆ. ಆರ್ಥಿಕವಾಗಿ ಹಿಂದುಳಿದಿರುವ ಬಡ ಜನರಿಗೆ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸುವ ಜೊತೆಗೆ ಅವಶ್ಯಕವಿದ್ದಲ್ಲಿ ಲೆನ್ಸ್ ಅಳವಡಿಸಲಾಗುವುದು ಎಂದಿದ್ದಾರೆ. ಮಾಹಿತಿಗೆ ಮೊ.9481950829, 9740429699, 9008607474, 9980025578, 9448024886 ಇಲ್ಲಿಗೆ ಸಂಪರ್ಕಿಸಲು ಕೋರಿದ್ದಾರೆ.


ಸಗಟು ಸೊಪ್ಪಿನ ಮಾರುಕಟ್ಟೆ ಸ್ಥಳಾಂತರ
ದಾವಣಗೆರೆ: ಕೆ.ಆರ್. ಮಾರುಕಟ್ಟೆಯಲ್ಲಿ ಸೊಪ್ಪಿನ ಸಗಟು ವ್ಯಾಪಾರ ವಹಿವಾಟು ನಡೆಸುತ್ತಿರುವ ವ್ಯಾಪಾರಸ್ಥರನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದ ರೈತ ಭವನ ಹಿಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಟ್ಟು, ಅಲ್ಲಿಗೆ ಸ್ಥಳಾಂತರಿಸಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕ್ರಮ ಕೈಗೊಂಡಿದೆ.
ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಅನೇಕ ವರ್ಷಗಳಿಂದಲೂ ಸೊಪ್ಪಿನ ಸಗಟು ವ್ಯಾಪಾರ ವಹಿವಾಟು ನಡೆಸುತ್ತಿದ್ದ ವ್ಯಾಪಾರಸ್ಥರಿಗೆ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರ ಕುರಿತಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಸಭೆಯ ನಿರ್ಣಯದಂತೆ ಸೊಪ್ಪಿನ ಬೆಳೆಗಾರರು, ವರ್ತಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿ, ಮಾರುಕಟ್ಟೆ ಪ್ರಾಂಗಣಕ್ಕೆ ಸೊಪ್ಪಿನ ವಹಿವಾಟನ್ನು ಜು.21ರಿಂದಲೇ ಸ್ಥಳಾಂತರಿಸಲಾಯಿತು. ಕಳೆದ 3- 4 ದಿನಗಳಿಂದ ಸೊಪ್ಪಿನ ವಹಿವಾಟು ನಡೆಯುತ್ತಿದೆ. ಎಪಿಎಂಸಿ ಪ್ರಾಂಗಣದ ರೈತ ಭವನದ ಹಿಂಭಾಗದಲ್ಲಿ ಸ್ಥಳಾವಕಾಶ ಮಾಡಿಕೊಡಲಾಗಿದೆ.ಎಪಿಎಂಸಿ ಅಧ್ಯಕ್ಷ ಬಿ. ಪ್ರಭು, ಸದಸ್ಯ ಎಂ. ಶಿವಕುಮಾರ, ಕಾರ್ಯದರ್ಶಿ ಬಿ.ಎಚ್. ನರಸಿಂಹಮೂರ್ತಿ ಹಾಗೂ ಸಹಾಯಕ ಕಾರ್ಯದರ್ಶಿ ಜೆ. ಪ್ರಭು, ಎಸ್. ಶ್ಯಾಮ್ ಇತರರು ಭೇಟಿ ಮಾಡಿ, ಪರಿಶೀಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್