ದಾವಣಗೆರೆ

ಹರಿಹರ ತಾಪಂ ಅಧ್ಯಕ್ಷ ಅಣ್ಣಪ್ಪ ಐರಣಿ

ಹರಿಹರ: ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಅಣ್ಣಪ್ಪ ಐರಣಿ ಹಾಗೂ ಉಪಾಧ್ಯಕ್ಷರಾಗಿ ಸರೋಜಮ್ಮ ಸೋಮಶೇಖರಪ್ಪ ಆಯ್ಕೆಯಾಗಿದ್ದಾರೆ.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೊನೆಯ 20 ತಿಂಗಳ ಅವಧಿಗೆ ನೂತನ ಮೀಸಲು ಪ್ರಕಾರ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟದಿಂದ ಸ್ಪರ್ಧಿಸಿದ್ದ ಅಣ್ಣಪ್ಪ 2 ಮತಗಳ ಅಂತರದಿಂದ ಆಯ್ಕೆಯಾದರೆ. ಸರೋಜಮ್ಮ ಅವಿರೋಧವಾಗಿ ಆಯ್ಕೆಯಾದರು.
ಬಿಜೆಪಿಯಿಂದ ಸ್ಪರ್ಧಿಸಿದ್ದ ಆಲಿವಾಣ ಕ್ಷೇತ್ರದ ಅಣ್ಣಪ್ಪ 10 ಮತ ಪಡೆದರೆ, ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಕನ್ನಪ್ಪ 8 ಮತ ಪಡೆದರು.
ಉಪಾಧ್ಯಕ್ಷ ಸ್ಥಾನ ಎಸ್.ಟಿ. ಮಹಿಳಾ ಮೀಸಲಾತಿ ಇದ್ದ ಕಾರಣ ತಾಲೂಕು ಪಂಚಾಯಿತಿಯಲ್ಲಿರುವ ಏಕೈಕ ಅಭ್ಯರ್ಥಿ ಸರೋಜಮ್ಮ ನಾಮಪತ್ರ ಸಲ್ಲಿಸಿದ್ದರಿಂದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹರಿಹರ ತಾಲೂಕು ಪಂಚಾಯಿತಿ ಒಟ್ಟು 18 ಸದಸ್ಯರನ್ನು ಹೊಂದಿದ್ದು, ಬಿಜೆಪಿ 8, ಕಾಂಗ್ರೆಸ್ 7, ಜೆಡಿಎಸ್ 2 ಹಾಗೂ ಓರ್ವ ಪಕ್ಷೇತರ ಸದಸ್ಯರ ಬಲಾಬಲ ಹೊಂದಿದೆ.
ಈ ಹಿಂದೆ ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟ ಒಪ್ಪಂದದಂತೆ ಎರಡನೇ ಅವಧಿಗೆ ಬಿಜೆಪಿ ಅಭ್ಯರ್ಥಿ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ. ಅಧ್ಯಕ್ಷರಾಗಿರುವ ಅಣ್ಣೇಶ್ ಹಾಲಿವಾಣ ಕ್ಷೇತ್ರದಿಂದ ಆಯ್ಕೆಯಾಗಿದ್ದರೆ ಉಪಾಧ್ಯಕ್ಷೆ ಸರೋಜಮ್ಮ ಕೊಕ್ಕನೂರು ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ಡಾ. ನಾಗರಾಜ ಕಾರ್ಯ ನಿರ್ವಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!