ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಧಾರವಾಡ: ಅಕ್ರಮ ಮದ್ಯ ವಶ

Vishwanath S
Updated On : 2 Apr 2013, 10:57 am

ಧಾರವಾಡ: ಇಲ್ಲಿನ ಚಪ್ಪರಬಂದ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಗೋವಾ ಮೂಲದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಸೋಮವಾರ ವಶಪಡಿಸಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ ಶಬ್ಬೀರ್ ಕಲಾವಂತ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 14 ಲೀಟರ್ ಮದ್ಯ ವಶಪಡಿಸಿಕೊಂಡಿದ್ದಾರೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಅಬಕಾರಿ ಇನ್ಸ್.ಪೆಕ್ಟರ್ ಪ್ರೇಮಸಿಂಗ್ ಲಮಾಣಿ ಮತ್ತು ಸಿಬ್ಬಂದಿ ಡಿ.ಬಿ. ಸರವರ, ಆರ್.ಎಸ್. ಗೋಲಂದಾಜ, ಪಿ.ವೈ. ಮುಳಗುಂದ ಮತ್ತು ಪಿ.ಐ. ಹಕಾರಿ ದಾಳಿ ನಡೆಸಿದ್ದರು. ಈ ಕುರಿತು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement