ನಾಳೆ ಹುಬ್ಬಳ್ಳಿಗೆ ಪ್ರಧಾನಿ
ಹುಬ್ಬಳ್ಳಿ: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ನಗರದ ನೆಹರು ಮೈದಾನದಲ್ಲಿ ಏ. 29ರಂದು ಬೆಳಗ್ಗೆ 10ಕ್ಕೆ ನಡೆಯಲಿರುವ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಪ್ರಧಾನಿ ಮನಮೋಹನ ಸಿಂಗ್ ಪಾಲ್ಗೊಳ್ಳಲಿದ್ದಾರೆ. ಶನಿವಾರ ನಗರದಲ್ಲಿ ನಡೆದ ಬಹಿರಂಗ ಪ್ರಚಾರ ಸಭೆಯ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ತಿಳಿಸಿದ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ, ಎಐಸಿಸಿ ಕರ್ನಾಟಕ ಉಸ್ತುವಾರಿ ವಹಿಸಿರುವ ಮಧುಸೂಧನ ಮೇಸ್ತ್ರಿ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಎಸ್.ಆರ್. ಪಾಟೀಲ, ಕೇಂದ್ರ ಸಚಿವರು ಹಾಗೂ ರಾಜ್ಯದ ಹಿರಿಯ ನಾಯಕರು ಭಾಗವಹಿಸುವರು ಎಂದು ತಿಳಿಸಿದರು. ಧಾರವಾಡ ಗ್ರಾಮೀಣ ಜಿಲ್ಲಾ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಜಿಲ್ಲೆಯ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು, ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಇರುವರು.