ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಪ್ರೌಢಶಾಲಾ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ

Lingaraj Badiger
Updated On : 6 Aug 2013, 11:58 am

ಧಾರವಾಡ: ಜಿಇಟಿ ಸಮೂಹ ಶಿಕ್ಷಣ ಸಂಸ್ಥೆ, ವೀರಭದ್ರೇಶ್ವರ ಮಾರ್ಕೇಟಿಂಗ್ ಮತ್ತು ಗ್ರೀನ್ ಆರ್ಮಿ ಜಂಟಿಯಾಗಿ ಮಕ್ಕಳಲ್ಲಿ ದೇಶಾಭಿಮಾನ ಬೆಳೆಸುವ ನಿಟ್ಟಿನಲ್ಲಿ 67ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರೌಢಶಾಲಾ ಮಕ್ಕಳಿಗೆ ಭಾರತ ಸ್ವಾತಂತ್ರ್ಯ ಹೋರಾಟದ ಸನ್ನಿವೇಶಗಳು ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿದೆ.
ಸ್ಪರ್ಧೆ ಆ. 14ರಂದು ಮಧ್ಯಾಹ್ನ 3ರಿಂದ 5ರ ವರೆಗೆ ಹಮ್ಮಿಕೊಳ್ಳಲಾಹಗಿದೆ. ಭಾಗವಹಿಸುವ ಎಲ್ಲ ಮಕ್ಕಳಿಗೆ ಪ್ರಮಾಣಪತ್ರ ನೀಡುವುದರ ಜೊತೆಗೆ ಪ್ರಥಮ ( 2,500), ದ್ವಿತೀಯ ( 1,500), ತೃತೀಯ ( 1000) ಹಾಗೂ ಎರಡು ಸಮಾಧಾನಕರ (ತಲಾ ರು. 500) ಬಹುಮಾನಗಳನ್ನು ಮತ್ತು ಪ್ರಶಸ್ತಿ ಫಲಕಗಳನ್ನು ನೀಡಲಾಗುವುದು.
ಪ್ರವೇಶ ಉಚಿತವಾಗಿದ್ದು, ಆ. 10ರೊಳಗೆ ಹೆಸರು ನೋಂದಾಯಿಸಬೇಕು. 0836-2445567 ಹಾಗೂ 95358 14381 ಸಂಪರ್ಕಿಸಬೇಕೆಂದು ಗ್ರೀನ್ ಆರ್ಮಿ ಅಧ್ಯಕ್ಷ ಪ್ರಕಾಶ ಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement