ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕಿಮ್ಸ್ ಭ್ರಷ್ಟ ವೈದ್ಯರಅಮಾನತುಗೊಳಿಸಿ

Vishwanath S
Updated On : 7 Aug 2013, 11:00 am

ಹುಬ್ಬಳ್ಳಿ: ಕಿಮ್ಸ್‌ನಲ್ಲಿರುವ ಭ್ರಷ್ಟ ವೈದ್ಯರನ್ನು ಕೂಡಲೇ ಅಮಾನತುಗೊಳಿಸಿ ಬಂಧಿಸುವ ಜೊತೆಗೆ ಲೋಕಾಯುಕ್ತ ತನಿಖೆಗೆ ಒಳಪಡಿಸಬೇಕು ಎಂದು ಮಾನವ ಹಕ್ಕು ಹಾಗೂ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಎಸ್.ಪಿ. ಕಿಲಾರಿಮಠ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರೋಗಿಗಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಕಿಮ್ಸ್‌ಗೆ ಪ್ರತಿ ವರ್ಷ ಕೋಟ್ಯಂತರ ರು. ಹಣ ವೆಚ್ಚ ಮಾಡುತ್ತಿದೆ. ಇಲ್ಲಿನ ವೈದ್ಯರು ಪ್ರತಿ ತಿಂಗಳು ಲಕ್ಷಾಂತರ ರು. ಸಂಬಳ ಪಡೆಯುತ್ತಿದ್ದರೂ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಸಂಬಳ ಪಡೆಯುವ ಕಿಮ್ಸ್‌ನಲ್ಲಿ ಕೆಲಸ ನಿರ್ವಹಿಸದೆ, ತಮ್ಮ ಖಾಸಗಿ ಆಸ್ಪತ್ರೆಯಲ್ಲಿಯೇ ಹೆಚ್ಚಿನ ಸಮಯ ಕಳೆಯುತ್ತಾರೆ ಎಂದು ಆರೋಪಿಸಿದ್ದಾರೆ. ಇಂಥ ವೈದ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಕ್ಕಾಗಿ ಪ್ರತಿ ವಿಭಾಗ ಹಾಗೂ ಆಪರೇಶನ್ ಥೇಟರ್‌ಗೆ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಧಿ ವಿಸ್ತರಣೆ
ಹುಬ್ಬಳ್ಳಿ: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಗೆ ಅನುಗುಣವಾದ ಕೋರ್ಸುಗಳ ಪ್ರಥಮ ಡಿಪ್ಲೋಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ಅವಧಿ ವಿಸ್ತರಿಸಿ ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಆನ್‌ಲೈನ್ ಮೂಲಕ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಪ್ರಥಮ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದೆ. ಖಾಲಿ ಉಳಿದಿರುವ ಸೀಟುಗಳನ್ನು ಆಯಾ ಸರ್ಕಾರಿ, ಅನುದಾನಿತ ಅಥವಾ ಖಾಸಗಿ ಪಾಲಿಟೆಕ್ನಿಕ್‌ಗಳ ಪ್ರಾಂಶುಪಾಲರು ತಮ್ಮ ಹಂತದಲ್ಲಿಯೇ ಆಫ್‌ಲೈನ್ ಮುಖಾಂತರ ಅರ್ಜಿ ವಿತರಿಸಿ, ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಪಡೆಯಲು ಹಾಗೂ ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಈ ಮೊದಲಿದ್ದ ಆ. 7ರ ದಿನಾಂಕವನ್ನು ಆ. 13ರ ಮಧ್ಯಾಹ್ನ 2 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಆ. 13ರಂದು ಸಂಜೆ 5ಕ್ಕೆ ಕಾಲೇಜಿನ ಸೂಚನಾ ಫಲಕದಲ್ಲಿ ಅರ್ಹ ಅಭ್ಯರ್ಥಿಗಳ ಮೆರಿಟ್ ಪಟ್ಟಿ ಲಗತ್ತಿಸಲಾಗುವುದು. ಆ. 14ರಂದು ಬೆಳಗ್ಗೆ 8ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಳ್ಳುವುದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ಕಾಲೇಜಿನಲ್ಲಿಯೇ ಪ್ರವೇಶ ಪಡೆಯಲು ಆ. 14ರ ಬೆಳಗ್ಗೆ 9ಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗೆ ದೂ-080 22356949 ಸಂಪರ್ಕಿಸಲು ಕೋರಲಾಗಿದೆ.
ವ್ಯಕ್ತಿ ನಾಪತ್ತೆ
ಹುಬ್ಬಳ್ಳಿ: ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ದೇಶಪಾಂಡೆ ನಗರದ ನಿವಾಸಿ ಸುರೇಶ ನಾರಾಯಣಸಾ ಕಬಾಡೆ (55) ಇವರು ಕಾಣೆಯಾಗಿದ್ದಾರೆ ಎಂದು ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆಲವು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋಗಿದ್ದ ಸುರೇಶ ಕಬಾಡೆ ಅವರು ಇಲ್ಲಿಯವರೆಗೆ ಮನೆಗೆ ಮರಳಿಲ್ಲ ಎಂದು ಗಣೇಶ ಕಬಾಡೆ ದೂರು ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement