ಕೇಂದ್ರ ಸರ್ಕಾರದ ವಜಾಕ್ಕೆ ಎಬಿವಿಬಿ ಒತ್ತಾಯ
ಧಾರವಾಡ: ಕೇಂದ್ರ ಯುಪಿಎ ಸರ್ಕಾರ ಹಲವಾರು ಹಗರಣಗಳಲ್ಲಿ ಅಂದಾಜು 12 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿರುವುದು ಸಾಬೀತಾಗಿದ್ದು, ಈ ಕೂಡಲೇ ಕೇಂದ್ರ ಸರ್ಕಾರವನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಇಲ್ಲಿನ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಮಾಡುತ್ತಿರುವ ಹಗರಣಗಳಿಂದ ಬೆಲೆ ಏರಿಕೆ ತಡೆಗಟ್ಟು ಸಾಧ್ಯವಾಗುತ್ತಿಲ್ಲ. ಅಲ್ಲದೆ, ದಿನದಿಂದ ದಿನಕ್ಕೆ ರೂಪಾಯಿ ಮೌಲ್ಯ ಕುಸಿಯುತ್ತಿದೆ. ಸರ್ಕಾರ ವಿದೇಶಿ ನೀತಿ ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಆಂತರಿಕ ಹಾಗೂ ಬಾಹ್ಯ ಸುರಕ್ಷೆ ಇಲ್ಲದಂತಾಗಿದೆ. ಅಂತೆಯೇ ಪ್ರಸ್ತುತ ಶಿಕ್ಷಣ ಕ್ಷೇತ್ರ ವ್ಯಾಪಾರೀಕರಣ, ಭ್ರಷ್ಟಾಚಾರದಲ್ಲಿ ತೊಡಗಿದ್ದು ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆ. ಭ್ರಷ್ಟ ನೀತಿಯಿಂದಾಗಿ ದೇಶದ ಆರ್ಥಿಕ ನಷ್ಟ ಹಾಗೂ ವಿಕಾಸ ಕುಂಠಿತಗೊಳ್ಳುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಸಂಘಟನೆಯ ಜಿಲ್ಲಾಧ್ಯಕ್ಷ ಶರಣು ಅಂಗಡಿ, ಮಹೇಶ ಅಂಬಲಿ, ಈರಣ್ಣ ಜೋಡಳ್ಳಿ, ಬಸವೇಶ ಕೋರಿ, ಸಾಗರ, ಅಮೀತ ಮೋರೆ, ಬಸವರಾಜ ಜೆ, ಮಹಾಂತೇಶ ಕೈರಣ್ಣವರ, ಮಹಾಂತೇಶ ಎಸ್.ಸಿ. ಇದ್ದರು.