ಕಲಘಟಗಿ: ಮೆರವಣಿಗೆ, ಯುವ ಸಮಾವೇಶ
ಕಲಘಟಗಿ: ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ಗುರುವಾರ ಸಂಜೆ ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆಯನ್ನು ವಿವಿಧ ಜನಪರ ಸೇವಾ ಸಂಘಟನೆಗಳು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಸ್ವಾಗತ ಕೋರಿ ಬರಮಾಡಿಕೊಂಡರು.
ತಾಲೂಕು ಕಾನೂನು ಸೇವಾ ಸಮಿತಿ, ಸ್ವಾಮಿ ವಿವೇಕಾನಂದ ಜ್ಞಾನಾಶ್ರಮ ಘಟಕ, ತಾಲೂಕು ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಂಡಿದ್ದ ರಥಯಾತ್ರೆ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅನಂತರ ಶಿವಗಂಗಾ ಚಿತ್ರ ಮಂದಿರದಲ್ಲಿ ಯುವ ಸಮಾವೇಶವಾಗಿ ಮಾರ್ಪಟ್ಟಿತು. ಡಾ ಎಚ್.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸ್ಥಳೀಯ ಹನ್ನೆರಡುಮಠದ ಶ್ರೀ ರೇವಣಸಿದ್ದ ಶಿವಾಚಾರ್ಯ ಶ್ರೀಗಳು ಉದ್ಘಾಟಿಸಿದರು.
ಬೆಂಗಳೂರಿನ ರಾಮಕೃಷ್ಣ ಮಠದ ಶ್ರೀ ಸ್ವಾಮಿ ತ್ಯಾಗೀಶ್ವರಾನಂದಜಿ ಮಹಾರಾಜ ಸ್ವಾಮೀಜಿ ಮಾತನಾಡಿದರು.
ಶ್ರೀ ರಾಮಕೃಷ್ಣಾಶ್ರಮದ ಶ್ರೀ ಮಹಾವಾಕ್ಯಾನಂದ ಮಹಾರಾಜ, ಮಹೇಶ್ವರನಂದಜೀ ಸ್ವಾಮೀಜಿ, ವಿಜಯಾನಂದ ಸರಸ್ವತಿ ಸ್ವಾಮೀಜಿ, ವೀರೇಶಾನಂದಜೀ ಸ್ವಾಮೀಜಿ, ರಮೇಶ ಉಮರಾಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮಾಳಗಿ, ರಾಜಶೇಖರ ಪಾಟೀಲ, ಪಿ.ವಿ. ನಾಯಕ, ಅನಿಲ ಪಮ್ಮಾರ, ಶ್ರೀಮತಿ ಬೀಳಗಿ, ವಿ.ಎನ್. ಹಾಲಿ, ಐ. ಎನ್. ಜವಳಿ ಇತರರು ಪಾಲ್ಗೊಂಡಿದ್ದರು.