ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಅತ್ಯಾಚಾರ ಖಂಡಿಸಿ ಪ್ರತಿಭಟನೆ

Mainashree
Updated On : 25 Aug 2013, 12:34 pm

ಧಾರವಾಡ: ಮುಂಬೈನ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ನಗರದ ಪತ್ರಕರ್ತರು ಹಾಗೂ ಎಐಡಿಎಸ್‌ಓ ಸಂಘಟನೆ ಜಂಟಿಯಾಗಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.
ದೇಶದಲ್ಲಿ ಮೇಲಿಂದ ಮೇಲೆ ಅತ್ಯಾಚಾರ ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ.
ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ನಂತರ ದೇಶದೆಲ್ಲೆಡೆ ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಗಳು ಕೇಳಿ ಬಂದವು. ಆದರೆ, ಸರ್ಕಾರ ಮಹಿಳೆಯರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯಾವುದೇ ದಿಟ್ಟ ನಿಲುವು ತೆಗೆದುಕೊಳ್ಳಲು ಮುಂದಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ವರದಿಗಾರರಿಗೆ ಸೂಕ್ತ ಭದ್ರತೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಮಹಿಳಾ ವರದಿಗಾರರಿಗೆ ಸೂಕ್ತ ಕಾನೂನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಭದ್ರತೆ ಒದಗಿಸಬೇಕು. ಕಾರ್ಯನಿರತ ಪತ್ರಿಕೆಯ ಛಾಯಾಗ್ರಾಹಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಪತ್ರಕರ್ತರಾದ ಪುಂಡಲೀಕ ಹಡಪದ, ಮುಸ್ತಫಾ ಕುನ್ನಿಬಾವಿ, ಪ್ರಭಾವತಿ ಗೂಗಲ್, ಮೂರ್ತಿ ಪ್ಯಾಟಿ, ಮನೋಜಕುಮಾರ ಗುದ್ದಿ, ನಾಗರಾಜ ಕಿರಣಗಿ, ಅಂಬರೀಶ ರಾಠೋಡ, ರವಿ ಕಗ್ಗಣ್ಣವರ, ರಾಮಚಂದ್ರ ಕುಲಕರ್ಣಿ, ಜಾವೇದ ಅಧೋನಿ, ಪ್ರಶಾಂತ ದಿನ್ನಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement