ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಕೃಷ್ಣಾ ಐತೀರ್ಪು ಚರ್ಚೆಯಾಗಲಿ

Mainashree
Updated On : 1 Dec 2013, 10:35 am

ಹುಬ್ಬಳ್ಳಿ: ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗ್ರಹಿಸಿದ್ದಾರೆ. ಭಾನುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಾಧಿಕಾರ ನೀಡಿರುವ ತೀರ್ಪಿನಿಂದ ಆಗಿರುವ ಸಾಧಕ-ಬಾಧಕಗಳ ಬಗ್ಗೆ ವಿಧಾನಮಂಡಲದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಲಾವಕಾಶ ಮೀಸಲಿಡಬೇಕು. ಅಲ್ಲದೇ, ಈ ಕುರಿತು ನ್ಯಾಯಾಲಯದಲ್ಲಿ ರಾಜ್ಯದ ಪರವಾಗಿ ವಾದಿಸಿದ ತಜ್ಞ ನ್ಯಾಯವಾದಿಗಳನ್ನು ಚರ್ಚೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕಲ್ಲದೇ, ತಜ್ಞರೇ ತೀರ್ಪಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಅನುಕೂಲ ಹಾಗೂ ಅನಾನುಕೂಲವಾಗಿರುವ ವಿಷಯಗಳ ಬಗ್ಗೆ ಮಾಹಿತಿ ನೀಡಬೇಕು' ಎಂದೂ ಶೆಟ್ಟರ್ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement