ಬಸ್ ಪಲ್ಟಿ ಮೂವರಿಗೆ ಗಾಯ
ಕನ್ನಡಪ್ರಭ ವಾರ್ತೆ, ಧಾರವಾಡ, ಡಿ. 1
ಧಾರವಾಡ- ನವಲಗುಂದ ರಸ್ತೆಯ ಮಾರಡಗಿ ಕ್ರಾಸ್ ಬಳಿ ಭಾನುವಾರ ಬೆಳಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ ಮೂವರು ಪ್ರಯಾಣಿಕರನ್ನು ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿದೆ.
ನವಲಗುಂದದಿಂದ ಬೈಲಹೊಂಗಲಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ಚಾಲಕ, ಇನ್ನೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಸೇತುವೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಎಸ್‌ಐ ಕಲೈಗಾರ ಮತ್ತು ಮುಖ್ಯ ಪೇದೆ ಎಫ್.ಎಂ.ಮಂಟೂರ ಭೇಟಿ ನೀಡಿದ್ದರು.
ನಿರ್ಲಕ್ಷ್ಯತನದಿಂದ ಬಸ್ ಚಾಲನೆ ಮಾಡಿದ ಎಸ್.ಜಿ. ಕಿತ್ತೂರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.