ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಾಜಿ ಸಚಿವ ಕತ್ತಿ ಹೇಳಿಕೆ ಸ್ವಾರ್ಥದ್ದು: ಸಿಎಂ

Lingaraj Badiger
Updated On : 4 Dec 2013, 11:33 am

ಧಾರವಾಡ: ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿರುವ ಮಾಜಿ ಸಚಿವ ಉಮೇಶ ಕತ್ತಿ ಅವರಿಗೇನು ಗೊತ್ತು ಕರ್ನಾಟಕದ ಇತಿಹಾಸ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ನಗರದಿಂದ ಅಳ್ನಾವರ ರಸ್ತೆಯಲ್ಲಿ ಸುಮಾರು 8 ಕಿ.ಮೀ. ದೂರ ಇರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರ ಫಾರ್ಮ್‌ಹೌಸ್‌ನಲ್ಲಿ ಏರ್ಪಡಿಸಿದ್ದ ವಿಶೇಷ ಔತಣಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಮಾಜಿ ಸಚಿವ ಕತ್ತಿ ಅವರು ತಮ್ಮ ಸ್ವಾರ್ಥ ಸಾಧನೆಗೆ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಾಡು, ನುಡಿಯ ಬಗ್ಗೆ ಅಪಸ್ವರ ಎತ್ತುವುದು ಸರಿ ಅಲ್ಲ. ಕತ್ತಿ ಅವರು ಇನ್ನಾದರೂ ತಮ್ಮ ವರ್ತನೆ ತಿದ್ದಿಕೊಳ್ಳಲಿ ಎಂದು ಸಲಹೆ ನೀಡಿದರು. ಕರ್ನಾಟಕ ಏಕೀಕರಣಕ್ಕಾಗಿ ಅನೇಕರು ಹಗಲಿರುಳು ದುಡಿದಿದ್ದಾರೆ. ಅಂಥವರ ಶ್ರಮಕ್ಕೆ ಅರ್ಥವೇ ಇಲ್ಲವೆನ್ನುವಂತೆ ಕತ್ತಿ ಅವರು ಮಾತನಾಡುತ್ತಿದ್ದಾರೆ. ಕತ್ತಿ ಅವರ ಹೇಳಿಕೆಗೆ ಪ್ರಾಮುಖ್ಯತೆ ಕೊಡುವ ಅವಶ್ಯಕತೆ ಇಲ್ಲ ಎಂದರು. ಕಬ್ಬು ಬೆಳೆಗೆ ಬೆಲೆ ನಿಗದಿ ಕುರಿತು ಡಿ. 9ರಂದು ಬೆಂಗಳೂರಿನಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ, ಸಚಿವರಾದ ರಾಮಲಿಂಗಾರೆಡ್ಡಿ, ರಮಾನಾಥ ರೈ, ಟಿ.ಜೆ. ಜಾರ್ಜ್, ಶ್ರೀನಿವಾಸ ಪ್ರಸಾದ, ಎಚ್.ಸಿ. ಮಹಾದೇವಪ್ಪ, ಟಿ.ಬಿ. ಜಯಚಂದ್ರ ಮತ್ತಿತರ ಸಚಿವರು ಹಾಗೂ ಕಾಂಗ್ರೆಸ್ ಶಾಸಕರು ಔತಣಕೂಟದಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement