ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮೂಢನಂಬಿಕೆ ಕಾನೂನು ವಿರೋಧಿಸಿ ಪ್ರತಿಭಟನೆ

Rashmi Kasaragodu
Updated On : 9 Dec 2013, 11:19 am

ಹುಬ್ಬಳ್ಳಿ: ಮೂಢನಂಬಿಕೆ ಪ್ರತಿಬಂಧಕ ಕಾನೂನು ಜಾರಿ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅನೇಕ ಮುಖಂಡರು, ಈ ಕಾನೂನಿನಿಂದ ಹಿಂದೂ ಧರ್ಮೀಯರ ನಂಬಿಕೆಗೆ ಚ್ಯುತಿ ಉಂಟಾಗಲಿದೆ ಎಂದು ದೂರಿದರು. ಮಸೂದೆಯ ರಚನಾ ಸಮಿತಿಯಲ್ಲಿ ಹಿಂದೂ ಧಾರ್ಮಿಕ ಮುಖಂಡರಿಗೂ ಭಾಗವಹಿಸಲು ಅವಕಾಶ ನೀಡಬೇಕು ಎಂದೂ ಒತ್ತಾಯಿಸಿದರು. ರಾಜ್ಯದಲ್ಲಿ ಈ ಕಾನೂನನ್ನು ತರುವ ಪ್ರಯತ್ನಗಳು ನಡೆದಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಸಮಸ್ತ ಸಾಧು-ಸಂತರು ಹಾಗೂ ಹಿಂದೂ ಸಂಘಟನೆಗಳೊಂದಿಗೆ ರಾಜ್ಯವ್ಯಾಪಿ ತೀವ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಸರ್ಕಾರಕ್ಕೆ ಎಚ್ಚರಿಸಲಾಯಿತು. ಸುಧಾ ಅವಾರಿ ಪ್ರತಿಭಟನೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement