ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಜನರ ಸಮಸ್ಯೆ ಆಲಿಸಿದ ಮಾಜಿ ಸಿಎಂ

Mainashree
Updated On : 11 Dec 2013, 12:04 pm

ಹುಬ್ಬಳ್ಳಿ: ನಗರದ ವಿವಿಧ ಬಡಾವಣೆಗಳಿಗೆ ಇತ್ತೀಚೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಜನರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್‌ನಗರ, ಶಾಂತಿ ಕಾಲೋನಿ, ಬೆಂಗೇರಿ ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರೆದುರು ಜನರು ಹಲವಾರು ಸಮಸ್ಯೆಗಳನ್ನು ಅವಲತ್ತುಕೊಂಡರು. ಪಾಲಿಕೆ ಆಯುಕ್ತ ರಮಣದೀಪ ಚೌಧರಿ ಕೂಡ ಜನರ ಸಮಸ್ಯೆಗಳನ್ನು ಆಲಿಸಿದರು. ಶಾಂತಿ ಕಾಲೋನಿಗೆ ಮಾಜಿ ಮುಖ್ಯಮಂತ್ರಿ ಶೆಟ್ಟರ ಅವರ ಭೇಟಿ ನೀಡಿದ ವೇಳೆ ಅಲ್ಲಿನ ಜನರು ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ರಸ್ತೆ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಬೇಕಾದ ಪಾಲಿಕೆ ಸಿಬ್ಬಂದಿ ತಮ್ಮ ಕರ್ತವ್ಯ ಮಾಡುತ್ತಿಲ್ಲ. ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಒಳಚರಂಡಿ ಕಾಮಗಾರಿ ವೇಳೆ ಅಗೆದಿರುವ ರಸ್ತೆಗಳನ್ನು ಇನ್ನೂ ಸುಧಾರಿಸದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಧೂಳು ಏಳುತ್ತಿದ್ದು, ಇದು ಅನಾರೋಗ್ಯಕ್ಕೆ ಕಾರಣವಾಗುತ್ತಿದೆ ಎಂದು ಆಪಾದಿಸಿದರು. ಜನರ ಸಮಸ್ಯೆಗಳನ್ನು ಶಾಂತ ಚಿತ್ತದಿಂದ ಆಲಿಸಿದ ಶಾಸಕ ಜಗದೀಶ ಶೆಟ್ಟರ, ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಒಂದು ವಾರದ ಅವಧಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ತಾಕೀತು ಮಾಡಿದರು. ನಂತರ ಕಾಟನ್ ಮಾರ್ಕೇಟ್‌ನಲ್ಲಿರುವ ಕನ್ವೇಷನ್ ಹಾಲ್‌ನಲ್ಲಿ ಹುಬ್ಬಳ್ಳಿ ನಗರ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಮೀರ್ ಶುಕ್ಲ, ಪಾಲಿಕೆ ಆಯುಕ್ತ ರಮಣದೀಪ ಚೌಧರಿ, ಸಂಸದ ಪ್ರಹ್ಲಾದ ಜೋಶಿ, ಮಾಜಿ ಮೇಯರ್ ವೀರಣ್ಣ ಸವಡಿ ಮತ್ತು ಬಿಜೆಪಿ ಸ್ಥಳೀಯ ಮುಖಂಡರಾದ ನಾಗೇಶ ಕಲ್ಬುರ್ಗಿ, ಜಿಲ್ಲಾ ವಕ್ತಾರ ವಿಠಲ ಶಾಸ್ತ್ರಿ ಸೇರಿದಂತೆ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement