ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಮಹಾನಗರ ಪಾಲಿಕೆ ಆಯುಕ್ತರ ಕಾರ್ಯ ತೃಪ್ತಿ ತಂದಿಲ್ಲ: ಶೆಟ್ಟರ್

Mainashree
Updated On : 19 Dec 2013, 10:35 am

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ರಮಣದೀಪ ಚೌಧರಿ ಅವರ ಕಾರ್ಯವೈಖರಿ ತಮಗೆ ತೃಪ್ತಿ ತಂದಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ಅವಳಿನಗರದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ನಿತ್ಯವೂ ಸಾರ್ವಜನಿಕರು ಪಾಲಿಕೆಯನ್ನು ಹಿಡಿಶಾಪ ಹಾಕುವಂತಾಗಿದೆ. ಆದ್ದರಿಂದ ಸ್ವಚ್ಛತಾ ಕಾರ್ಯ ಕೈಗೊಂಡಿದ್ದನ್ನು ಸ್ವತಃ ದೃಢಪಡಿಸಿಕೊಳ್ಳಲು ಆಯಾ ವಾರ್ಡ್‌ಗಳಿಗೆ ದಿಢೀರ್ ಭೇಟಿ ನೀಡುವಂತೆ ಆಯುಕ್ತರಿಗೆ ಸೂಚಿಸಿರುವುದಾಗಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು. ಆಯುಕ್ತ ಚೌಧರಿ ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಅವಶ್ಯಕವಾಗಿದೆ ಎಂದು ಅಭಿಪ್ರಾಯಪಟ್ಟ ಅವರು, ಕನ್ನಡ ಭಾಷೆಯ ಕಲಿಕೆಯೂ ಅನಿವಾರ್ಯವಾಗಿದೆ ಎಂದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement