ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಧಾರವಾಡ

ಸಿಇಟಿ: ಎಬಿವಿಪಿ ಪ್ರತಿಭಟನೆ ಸಿಇಟಿ: ಎಬಿವಿಪಿ ಪ್ರತಿಭಟನೆ

Mainashree
Updated On : 19 Dec 2013, 10:37 am

ಹುಬ್ಬಳ್ಳಿ: ವೃತ್ತಿ ಶಿಕ್ಷಣ (ಸಿಇಟಿ) ಪ್ರವೇಶಕ್ಕೆ 2006ರ ಕಾಯ್ದೆ ಅನುಷ್ಠಾನಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ದುರ್ಬಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ವಿಫಲವಾಗುವ ಮತ್ತು ಅವರ ಶೈಕ್ಷಣಿಕ ಹಕ್ಕನ್ನು ಮೊಟಕುಗೊಳಿಸುವ ಸರ್ಕಾರದ ಈ ನೀತಿ ವಿದ್ಯಾರ್ಥಿ ಹಾಗೂ ಶೈಕ್ಷಣಿಕ ವಿರೋಧಿ ನೀತಿಯಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದರು. ಸರ್ಕಾರ ಜಾರಿಗೆ ತರಲು ಹೊರಟಿರುವ ಈ ಕಾಯ್ದೆಯಿಂದ ಸಾಕಷ್ಟು ಅನಾನುಕೂಲತೆಗಳಾಗಲಿವೆ. ಸರ್ಕಾರ ಜಾರಿಗೊಳಿಸಲು ಹೊರಟಿರುವ ಈ ಕಾಯ್ದೆಯಿಂದಾಗಿ ಪ್ರಸ್ತುತ ಸರ್ಕಾರಿ ಕೋಟಾದಲ್ಲಿರುವ ಎಂಜಿನಿಯರಿಂಗ್‌ನ ಶೇ. 45, ಮೆಡಿಕಲ್‌ನ ಶೇ. 40, ದಂತ ವೈದ್ಯಕೀಯದ ಶೇ. 35 ಸೀಟುಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಪಾಲಾಗಲಿವೆ. ಯಾವುದೇ ಖಾಸಗಿ ಅನುದಾನರಹಿತ ಕಾಲೇಜಿನಲ್ಲಿ ಒಂದೂ ಸರ್ಕಾರಿ ಕೋಟಾದ ಸೀಟುಗಳು ಇಲ್ಲದಂತಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರ ಈ ವಿದ್ಯಾರ್ಥಿ ವಿರೋಧಿ ನೀತಿಯನ್ನು ಕೈಬಿಡಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳಬೇಕು ಎಂದರು.
ಎಬಿವಿಪಿ ನಗರ ಕಾರ್ಯದರ್ಶಿ ಸಿದ್ದು ಸಾಲಿಮಠ, ಸುಚಿತ್ ಬುಳ್ಳಾನವರ, ಮನೋಹರ ಜಮಾದಾರ, ತೇಜಸ್ ಗೋಕಾಕ, ರವಿ ಛಬ್ಬಿ, ನವೀನ ಗೌಡ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement